ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
9 ವರ್ಷದ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯೊಬ್ಬನಿಗೆ 5 ವರ್ಷಗಳ ಕಾಲ ಜೈಲು ಶಿಕ್ಷೆ ಪ್ರಕಟಿಸಿ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ.
Also Read: ಕುವೆಂಪು ವಿವಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ 131ನೇ ಜಯಂತಿ ಆಚರಣೆ
Also Read: ಸಚಿವರಾಗುತ್ತಾರಾ ಅಭಿವೃದ್ಧಿಯ ಹರಿಕಾರ, ಕ್ರಿಯಾಶೀಲ ಶಾಸಕ ಹಾಲಪ್ಪ
ಏನಿದು ಪ್ರಕರಣ?
ಶಿವಮೊಗ್ಗ ನಗರ ನಿವಾಸಿ ಮಂಜಪ್ಪ(49) ಎಂಬಾತನ ಮನೆಗೆ ಪಕ್ಕದ ಮನೆಯ 9 ವರ್ಷದ ಬಾಲಕಿ ಬೆಂಕಿಪೊಟ್ಟಣ ಕೇಳಿಕೊಂಡು ಹೋಗಿದ್ದಳು. ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಆತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ನೊಂದ ಬಾಲಕಿ ನೀಡಿದ ಹೇಳಿಕೆಯ ಆಧಾರದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ನ್ಯಾಯಾಧೀಶರು ಆರೋಪಿಗೆ 5 ವರ್ಷ ಕಠಿಣ ಕಾರಾಗೃಹ ವಾಸ ಹಾಗೂ 30 ಸಾವಿರ ರೂ. ದಂಡವನ್ನು ವಿಧಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post