ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಹಾರಾಷ್ಟ್ರದ ಪಂಡರಾಪುರ ಶ್ರೀಕ್ಷೇತ್ರದಲ್ಲಿ ರಾಜ್ಯದಿಂದ ತೆರಳುವ ಭಕ್ತರಿಗಾಗಿ ಅತಿಥಿ ಗೃಹ ನಿರ್ಮಾಣಕ್ಕೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
Also Read: ಸಚಿವರಾಗುತ್ತಾರಾ ಅಭಿವೃದ್ಧಿಯ ಹರಿಕಾರ, ಕ್ರಿಯಾಶೀಲ ಶಾಸಕ ಹಾಲಪ್ಪ
ಈ ಕುರಿತಂತೆ ಆದೇಶ ಹೊರಡಿಸಿರುವ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಪಂಡರಾಪುರ ಶ್ರೀಕ್ಷೇತ್ರಕ್ಕೆ ರಾಜ್ಯದಿಂದ ಸಾವಿರಾರು ಮಂದಿ ಭಕ್ತಾದಿಗಳು ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಹೆಚ್ಚಿನ ಜನರು ಭೇಟಿ ನೀಡುತ್ತಾರೆ. ಭಕ್ತಾದಿಗಳ ಅನುಕೂಲಕ್ಕಾಗಿ ಪಂಡರಾಪುರದಲ್ಲಿ ಅತಿಥಿಗೃಹ ನಿರ್ಮಾಣ ಮಾಡಲಾಗುತ್ತದೆ.
ಈ ಕುರಿತು 2022-23ನೆಯ ಸಾಲಿನ ಆಯವ್ಯದಲ್ಲಿ ಘೋಷಣೆ ಮಾಡಲಾಗಿದ್ದು, ಈ ಕುರಿತ ಪ್ರಸ್ತಾವನೆಗೆ 750 ಲಕ್ಷ ರೂ.ಗಳ ವೆಚ್ಚದಲ್ಲಿ ಸುಸಜ್ಜಿತ ಅತಿಥಿಗೃಹ ನಿರ್ಮಾಣಕ್ಕೆ ಸರ್ಕಾರದ ಮಂಜೂರಾತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
Also Read: ಕಾಶಿಯಾತ್ರೆಗೆ ತೆರಳುತ್ತೀರಾ? ಹಾಗಾದರೆ ರಾಜ್ಯ ಸರ್ಕಾರ ನೀಡಲಿದೆ ಸಹಾಯಧನ
ಸೊಲ್ಲಾಪುರ ಜಿಲ್ಲೆಯ ಪಂಡರಾಪುರ ಶ್ರೀಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಿದ್ದು, ಅವರ ಅನುಕೂಲಕ್ಕಾಗಿ ಪಂಡರಾಪುರದಲ್ಲಿ ರಾಜ್ಯದ ಛತ್ರ ನಿರ್ಮಾಣ ಮಾಡಬೇಕೆನ್ನುವುದು ಅನೇಕ ವರ್ಷಗಳ ಬೇಡಿಕೆಯಾಗಿತ್ತು ಎಂದಿದ್ದಾರೆ.
ಕಾಶಿಯಾತ್ರೆ ಮತ್ತು ಪಂಡರಾಪುರದಲ್ಲಿ ಕರ್ನಾಟಕ ಛತ್ರ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶಶಿಕಲಾ ಜೊಲ್ಲೆ ಕೃತಜ್ಞತೆ ಸಲ್ಲಿಸಿದ್ದಾರೆ.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















