No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, October 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ನೀರಾವರಿ ಯೋಜನೆಗಳಿಗೆ ಜೆಡಿಎಸ್ ಕೊಡುಗೆ ಅಪಾರ: ಮಾಜಿ ಸಚಿವ ರೇವಣ್ಣ

'ಜನತಾ ಜಲಧಾರೆ ಯಾತ್ರೆ' ಅಂಗವಾಗಿ ಬಿ.ಆರ್. ಪ್ರಾಜೆಕ್ಟ್‌ನಲ್ಲಿ ಬಹಿರಂಗ ಸಭೆ

kalpa News by kalpa News
April 23, 2022
in ಭದ್ರಾವತಿ
0
ನೀರಾವರಿ ಯೋಜನೆಗಳಿಗೆ ಜೆಡಿಎಸ್ ಕೊಡುಗೆ ಅಪಾರ: ಮಾಜಿ ಸಚಿವ ರೇವಣ್ಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ನೀರಾವರಿ ಯೋಜನೆಗಳಿಗೆ ಜೆಡಿಎಸ್ ಸರ್ಕಾರ ನೀಡಿರುವ ಕೊಡುಗೆ ಅಪಾರವಾಗಿದ್ದು, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ನೀಡಿರುವಷ್ಟು ಅನುದಾನ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ  ನೀಡಿಲ್ಲ ಎಂದು ಮಾಜಿ ಸಚಿವ ರೇವಣ್ಣ  Former Minister Revanna ಹೇಳಿದರು.

ಶನಿವಾರ ತಾಲೂಕಿನ ಭದ್ರಾ ಜಲಾಶಯ ಸಮೀಪದ ಬಿ.ಆರ್. ಪ್ರಾಜೆಕ್ಟ್‌ನಲ್ಲಿ ‘ಜನತಾ ಜಲಧಾರೆ ಯಾತ್ರೆ’ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬಹಿರಂಗ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ಸಹ ಇಂದಿಗೂ ನೀರಾವರಿ ಯೋಜನೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ. 50ವರ್ಷಗಳ ಕಾಲ ಆಡಳಿತ ನಡೆಸಿರುವ ಕಾಂಗ್ರೆಸ್ ಹಾಗು ಆ ನಂತರ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರಗಳು ನೀರಾವರಿ ಯೋಜನೆಗಳಿಗೆ ಹೆಚ್ಚಿನ ಮಹತ್ವ ನೀಡಿಲ್ಲ. ಇವುಗಳ ಕೊಡುಗೆ ಅತ್ಯಲ್ಪವಾಗಿದ್ದು, ಜೆಡಿಎಸ್ ಪಕ್ಷ ತನ್ನ ಅಧಿಕಾರದ ಅವಧಿಯಲ್ಲಿ ಹೆಚ್ಚಿನ ಅನುದಾನಗಳನ್ನು ಬಿಡುಗಡೆಗೊಳಿಸುವ ಮೂಲಕ ಹಲವು ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲಿದೆ ಎಂದು ಹೇಳಿದರು.

ಅಭಿವೃದ್ಧಿ ವಿಚಾರದಲ್ಲಿ ಜೆಡಿಎಸ್ ಎಂದಿಗೂ ಯಾರೊಂದಿಗೂ ರಾಜಿ ಮಾಡಿಕೊಂಡಿಲ್ಲ. ತನ್ನದೇ ಆದ ದೃಢ ನಿರ್ಧಾರಗಳನ್ನು ಹೊಂದಿದೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ  ಎ ಮತ್ತು ಬಿ ಟೀಮ್‌ಗಳಾಗಿ ಹೊಂದಾಣಿಕೆ ರಾಜಕಾರಣ ಮಾಡುತ್ತಿವೆ. ಕೋಲಾರದಲ್ಲಿ ಹಿರಿಯ ರಾಜಕೀಯ ಮುತ್ಸದ್ದಿ ಕೆ.ಎಚ್. ಮುನಿಯಪ್ಪನವರನ್ನು ಹಾಗು ತುಮಕೂರಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರನ್ನು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡು ಲೋಕಸಭಾ ಚುನಾವಣೆಯಲ್ಲಿ ಸೋಲಿಸಿವೆ ಎಂದರು.

ವಿಧಾನಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಶಾರದ ಅಪ್ಪಾಜಿ ಮಾತನಾಡಿ, ಕ್ಷೇತ್ರದ ಮಾಜಿ ಶಾಸಕರಾದ ದಿವಂಗತ ಎಂ.ಜೆ. ಅಪ್ಪಾಜಿಯವರ ಕೊಡುಗೆ ಅನನ್ಯವಾಗಿದೆ. ಅವರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ. ಕ್ಷೇತ್ರದಲ್ಲಿ ಅಪ್ಪಾಜಿಯವರ ಕನಸಿನ ಹಲವಾರು ನೀರಾವರಿ ಯೋಜನೆಗಳು ಇಂದಿಗೂ ಅನುಷ್ಠಾನಗೊಳ್ಳದೆ ನೆನೆಗುದಿಗೆ ಬಿದ್ದಿವೆ. ನೀರಾವರಿ ಯೋಜನೆಗಳು ಅನುಷ್ಠಾನಗೊಳ್ಳುವ ಜೊತೆಗೆ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳು ಪುನಶ್ಚೇತನಗೊಳ್ಳಬೇಕಾಗಿದೆ. ಕ್ಷೇತ್ರದಲ್ಲಿ ಹಲವಾರು ಸಮಸ್ಯೆಗಳು ಉಳಿದುಕೊಂಡಿವೆ. ಇವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ ಜೆಡಿಎಸ್ ಪಕ್ಷ ಬೆಂಬಲಿಸುವ ಮೂಲಕ ಕ್ಷೇತ್ರದಿಂದ ನನ್ನನ್ನು ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಬೇಕು. ಅಪ್ಪಾಜಿ ಅವರಿಗೆ ನೀಡುತ್ತಿದ್ದ ಎಲ್ಲಾ ರೀತಿಯ ಸಹಕಾರ ನನಗೂ ನೀಡಬೇಕೆಂದು ಮನವಿ ಮಾಡಿದರು.

Also read: ದೇಶದ ಎಲ್ಲ ಮುಸ್ಲಿಮರು ರಾಷ್ಟ್ರ ದ್ರೋಹಿಗಳಲ್ಲ : ಕಾಂಗ್ರೆಸ್​ ನಾಯಕರು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ ಯೋಗೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮಾಜಿ ಶಾಸಕಿ ಶಾರದ ಪೂರ್‍ಯಾನಾಯ್ಕ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ಪಕ್ಷದ ಯುವ ಘಟಕದ ನೂತನ ಜಿಲ್ಲಾಧ್ಯಕ್ಷ ಮಧುಕುಮಾರ್, ಯುವ ಘಟಕದ ತಾಲೂಕು ಅಧ್ಯಕ್ಷ ಎಂ.ಎ. ಅಜಿತ್, ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಸ್. ಮಣಿಶೇಖರ್, ಜೆ.ಪಿ. ಯೋಗೇಶ್, ಶಿಮೂಲ್ ಮಾಜಿ ಅಧ್ಯಕ್ಷ ಡಿ. ಆನಂದ್, ನಗರಸಭೆ ವಿರೋಧ ಪಕ್ಷದ ನಾಯಕ ಬಸವರಾಜ ಬಿ. ಆನೇಕೊಪ್ಪ, ಸದಸ್ಯರಾದ ಉದಯಕುಮಾರ್, ಕೋಟೇಶ್ವರರಾವ್, ವಿಜಯ, ಸವಿತಾ, ಜಯಶೀಲ, ರೇಖಾ, ಮಂಜುಳ, ಪಲ್ಲವಿ, ನಾಗರತ್ನ, ರೂಪಾವತಿ, ಮುಖಂಡರಾದ ಡಿ.ಟಿ ಶ್ರೀಧರ್, ಮುರ್ತುಜಾಖಾನ್, ನಂಜುಂಡೇಗೌಡ, ಲೋಕೇಶ್ವರರಾವ್, ಮೈಲಾರಪ್ಪ, ಉಮೇಶ್, ಗೊಂದಿ ಜಯರಾಂ, ದಿಲೀಪ್, ಗಿರಿನಾಯ್ಡು, ಗುಣಶೇಖರ್, ಕೆಬಲ್ ಸುರೇಶ್, ಅಶೋಕ್‌ಕುಮಾರ್, ಭಾಗ್ಯಮ್ಮ, ವಿಶಾಲಾಕ್ಷಿ ಸೇರಿದಂತೆ ಇನ್ನಿತರರು ಕೈಜೋಡಿಸಿ ಬಹಿರಂಗಸಭೆ ಯಶಸ್ವಿಗೆ ಮುಂದಾಗಿದ್ದಾರೆ.
ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಎಂ. ರಾಜು ಸ್ವಾಗತಿಸಿದರು. ಎಚ್.ಬಿ ರವಿಕುಮಾರ್ ವಂದಿಸಿದರು. ಮಾಜಿ ಉಪಾಧ್ಯಕ್ಷೆ ಮಹಾದೇವಿ ಸಂಗಡಿಗರು ಪ್ರಾರ್ಥಿಸಿದರು.

ಇದಕ್ಕೂ ಮೊದಲು ತಾಲೂಕಿನ ಶ್ರೀರಾಮನಗರದ ಶ್ರೀ ರಾಮೇಶ್ವರ ದೇವಸ್ಥಾನದಿಂದ ಬೆಳಿಗ್ಗೆ ‘ಜನತಾ ಜಲಧಾರೆ ಯಾತ್ರೆ’ಗೆ ಚಾಲನೆ ನೀಡಲಾಯಿತು. ಮಧ್ಯಾಹ್ನ ಸುಮಾರು 1 ಗಂಟೆಗೆ ಯಾತ್ರೆ ಬಿ.ಆರ್ ಪ್ರಾಜೆಕ್ಟ್ ತಲುಪಿತು. ನಂತರ ಭದ್ರಾ ಜಲಾಶಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ‘ಜನತಾ ಜಲಧಾರೆ ಯಾತ್ರೆ’ ರಥಕ್ಕೆ ಅಭಿಷೇಕ ಸಲ್ಲಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiFormer Minister RevannaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಮಾಜಿ ಸಚಿವ ರೇವಣ್ಣಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಶದ ಎಲ್ಲ ಮುಸ್ಲಿಮರು ರಾಷ್ಟ್ರ ದ್ರೋಹಿಗಳಲ್ಲ : ಕಾಂಗ್ರೆಸ್​ ನಾಯಕರು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ

Next Post

ಭದ್ರಾವತಿ ಗ್ರಾಮಾಂತರ ಪಿಐ ಚೈತನ್ಯ ಸೇರಿ ಜಿಲ್ಲೆಯ ಮೂವರು ಇನ್ಸ್’ಪೆಕ್ಟರ್’ಗಳ ವರ್ಗಾವಣೆ

kalpa News

kalpa News

Next Post
ಅವಳಿ ನಗರದ 150 ಪೊಲೀಸ್ ಸಿಬ್ಬಂದಿಗೆ ಕೋವಿಡ್ ದೃಢ!

ಭದ್ರಾವತಿ ಗ್ರಾಮಾಂತರ ಪಿಐ ಚೈತನ್ಯ ಸೇರಿ ಜಿಲ್ಲೆಯ ಮೂವರು ಇನ್ಸ್’ಪೆಕ್ಟರ್’ಗಳ ವರ್ಗಾವಣೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL