No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕುಸಿಯುತ್ತಿರುವ ಮಾಧ್ಯಮಗಳ ಮೌಲ್ಯ: ಎಚ್ಚರಿಕೆಯಿಂದಿರಲು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಸಲಹೆ

kalpa News by kalpa News
April 25, 2022
in ಬೆಂಗಳೂರು ನಗರ
0
ಕುಸಿಯುತ್ತಿರುವ ಮಾಧ್ಯಮಗಳ ಮೌಲ್ಯ: ಎಚ್ಚರಿಕೆಯಿಂದಿರಲು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಮುಕ್ತ, ಸ್ವತಂತ್ರ ಮತ್ತು ನಿರ್ಭೀತ ಪತ್ರಿಕಾ ಮಾಧ್ಯಮವಿಲ್ಲದೆ ಸದೃಢ ಮತ್ತು ಸಕ್ರಿಯ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವದ ಬೇರುಗಳನ್ನು ಬಲಪಡಿಸಲು ಭಾರತಕ್ಕೆ ಸದೃಢ, ಸ್ವತಂತ್ರ ಮತ್ತು ಸಕ್ರಿಯ ಮಾಧ್ಯಮದ ಅಗತ್ಯವಿದೆ ಎಂದು  ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು  Vice President Venkaiah Naidu ಹೇಳಿದರು.

ಬೆಂಗಳೂರು ಪ್ರೆಸ್ ಕ್ಲಬ್‌ನ Bangalore Press Club 50 ನೇ ವಾರ್ಷಿಕೋತ್ಸವದ ಅಂಗವಾಗಿ  ಪ್ರೆಸ್ ಕ್ಲಬ್‌ ಆವರಣದಲ್ಲಿ ನವ ಭಾರತದಲ್ಲಿ ಮಾಧ್ಯಮಗಳ ಪಾತ್ರ ಕುರಿತು ಮಾತನಾಡಿದ ಉಪರಾಷ್ಟ್ರಪತಿ ಗಳು, ಕುಸಿಯುತ್ತಿರುವ ಮಾಧ್ಯಮಗಳ ಮೌಲ್ಯಗಳ ಬಗ್ಗೆ ಎಚ್ಚರಿಕೆಯಿಂದ ಇರಲು ಸಲಹೆ ನೀಡಿದರು.

ವಿವಿಧ ಮಾಧ್ಯಮ ಸಂಸ್ಥೆಗಳ ಮುಖ್ಯಸ್ಥರು, ಸಂಪಾದಕರು ಮತ್ತು ಹಿರಿಯ ಪತ್ರಕರ್ತರನ್ನು ಉದ್ದೇಶಿಸಿ ಮಾತಾನಡಿದ ವೆಂಕಯ್ಯ ನಾಯ್ಡು, ಸಾಂವಿಧಾನಿಕ ಕಾನೂನಿನ ನಿಯಮವನ್ನು ಬಲಪಡಿಸುವ ವಿಚಾರಕ್ಕೆ ಬಂದರೆ, ಮುಕ್ತ ಮತ್ತು ನ್ಯಾಯಸಮ್ಮತ ಮಾಧ್ಯಮ  ಸ್ವತಂತ್ರ ನ್ಯಾಯಾಂಗಕ್ಕೆ ಪೂರಕವಾಗಿದೆ ಎಂದು ಅಭಿಪ್ರಾಯಪಟ್ಟರು.

ಮಾಧ್ಯಮಗಳಲ್ಲಿನ ಮೌಲ್ಯಗಳು ಕುಸಿಯುತ್ತಿರುವ ಬಗ್ಗೆ  ಎಚ್ಚರಿಕೆ ನೀಡಿದ ಉಪರಾಷ್ಟ್ರಪತಿ ಗಳು. ನಿಷ್ಪಕ್ಷಪಾತ ಮತ್ತು ವಸ್ತುನಿಷ್ಠ ವರದಿಗಾರಿಕೆಗೆ ಕರೆ ನೀಡಿದರು.

ಸುದ್ದಿಯನ್ನು ಅಭಿಪ್ರಾಯಗಳೊಂದಿಗೆ ಬೆರೆಸಬಾರದು:
ಹಿಂದೆ ಪತ್ರಿಕೋದ್ಯಮದಲ್ಲಿ ಸುದ್ದಿಯನ್ನು ಪವಿತ್ರವಾದ ಒಂದು ಧ್ಯೇಯವೆಂದು ಪರಿಗಣಿಸಲಾಗಿತ್ತು ಎಂದ ವೆಂಕಯ್ಯ ನಾಯ್ಡು ಅವರು , ಉತ್ತಮ ಪತ್ರಿಕೋದ್ಯಮವು ಘಟನೆಗಳ ನಿಷ್ಪಕ್ಷಪಾತ ಮತ್ತು ನೈಜ ಪ್ರಸಾರಕ್ಕೆ ಮತ್ತು ಜನರಿಗೆ ಅವುಗಳನ್ನು ನಂಬಲರ್ಹ ರೀತಿಯಲ್ಲಿ ತಲುಪಿಸುವುದರ ಮೇಲೆ ಅವಲಂಬಿತವಾಗಿದೆ ಎಂಬ ಅಂಶವನ್ನು ಬಲವಾಗಿ ಪ್ರತಿಪಾದಿಸಿದರು.

ಖಾಸಾ ಸುಬ್ಬಾ ರಾವು, ಫ್ರಾಂಕ್ ಮೊರೇಸ್ ಮತ್ತು ನಿಖಿಲ್ ಚಕ್ರವರ್ತಿಯಂತಹ ಹಿಂದಿನ ಹಲವು ಹೆಸರಾಂತ ಸುದ್ದಿ ಸಂಪಾದಕರ ಹೆಸರುಗಳನ್ನು ಉಲ್ಲೇಖಿಸಿದ ಉಪರಾಷ್ಟ್ರಪತಿಗಳು, ಅವರು ಎಂದಿಗೂ ಸುದ್ದಿಗೆ ತಮ್ಮ ಅಭಿಪ್ರಾಯದ  ಬಣ್ಣ ಹಚ್ಚುತ್ತಿರಲಿಲ್ಲ… ಮತ್ತು ಅವರು ಸದಾ ಸುದ್ದಿ ಮತ್ತು ಅಭಿಪ್ರಾಯಗಳ ನಡುವೆ ಲಕ್ಷ್ಮಣ ರೇಖೆಯನ್ನು ಗೌರವಿಸುತ್ತಿದ್ದರು ಎಂದು ಹೇಳಿದರು.
ಸ್ವಾತಂತ್ರ್ಯ ಸಂಗ್ರಾಮ ಹಾಗೂ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಅಪಾರ ಕೊಡುಗೆ ನೀಡಿದ ಪತ್ರಿಕೋದ್ಯಮದ ದಿಗ್ಗಜರಿಂದ ಇಂದಿನ ವೃತ್ತಿಪರರ ಸ್ಫೂರ್ತಿ ಪಡೆಯಬೇಕು ಎಂದು ಅವರು ಸಲಹೆ ನೀಡಿದರು.ಸುದ್ದಿಗಳನ್ನು ಅಭಿಪ್ರಾಯಗಳೊಂದಿಗೆ ಬೆರೆಸಬಾರದು ಎಂದು ಒತ್ತಿ ಹೇಳಿದ ಅವರು, ಮಾಧ್ಯಮದ ವ್ಯಕ್ತಿಗಳು ಎಂದಿಗೂ ಸತ್ಯದೊಂದಿಗೆ ರಾಜಿಮಾಡಿಕೊಳ್ಳಬೇಡಿ ಮತ್ತು ಸದಾ ಭಯ ಅಥವಾ ನಿಸ್ಪಕ್ಷಪಾತವಿಲ್ಲದೆ ಸುದ್ದಿಯನ್ನು ಪ್ರಸ್ತುತಪಡಿಸಬೇಕೆಂದು ಸಲಹೆ ನೀಡಿದರು…

ಇತ್ತೀಚಿನ ವರ್ಷಗಳಲ್ಲಿ ಪತ್ರಿಕೋದ್ಯಮದ ಮಾನದಂಡಗಳು ಭಾರಿ ಕುಸಿತವಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ವೆಂಕಯ್ಯ ನಾಯ್ಡು ಅವರು, ಇತ್ತೀಚಿನ ಸಾಮಾಜಿಕ ಮಾಧ್ಯಮಗಳ ಹೆಚ್ಚಳ ನೀರನ್ನು ಮತ್ತಷ್ಟು ಕೆಸರಿನಿಂದ ರಾಡಿಗೊಳಿಸಿದೆ ಎಂದು ಹೇಳಿದರು. “ ನಾವು ಇಂದು ಸದಾ  ಅಭಿಪ್ರಾಯದೊಂದಿಗೆ ಸುದ್ದಿಗಳನ್ನು ಸೇರಿಸುವುದನ್ನು ಕಾಣುತ್ತಿದ್ದೇವೆ. ಅದು ಎಷ್ಟರಮಟ್ಟಿಗೆ ಎಂದರೆ ಪತ್ರಿಕೆಗಳಾಗಲಿ ಅಥವಾ ದೂರದರ್ಶನ ವಾಹಿನಿಗಳಾಗಲಿ ಕೆಲವು ಘಟನೆಗಳ ನೈಜ ಚಿತ್ರಣವನ್ನೇ ನೀಡುವುದಿಲ್ಲ ಎಂದು ಕೆಲವೊಮ್ಮೆ ಭಾವಿಸುವಂತಾಗಿದೆ’’ ಎಂದು ಅವರು ಹೇಳಿದರು.

ಸಂಸತ್ತು ಮತ್ತು ಸರ್ಕಾರವು ಸಾಮಾಜಿಕ ಮಾಧ್ಯಮಗಳಲ್ಲಿನ ಸುಳ್ಳು ಸುದ್ದಿಗಳ ವಿಷಯವನ್ನು ಪರಿಶೀಲಿಸಬೇಕು ಮತ್ತು ಸುಳ್ಳು ಸುದ್ದಿಗಳನ್ನು ಎದುರಿಸಲು ಪರಿಣಾಮಕಾರಿ ಮತ್ತು ವಿಶ್ವಾಸಾರ್ಹ ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಪಕ್ಷಪಾತದ ಸುದ್ದಿ ಪ್ರಸ್ತುತಿ ಮತ್ತು ಘಟನೆಗಳನ್ನು ನಿರ್ದಿಷ್ಟ ಕಾರ್ಯಸೂಚಿ ಇಟ್ಟುಕೊಂಡು ಪ್ರಸಾರ ಮಾಡುವ ಬಗ್ಗೆ ಗಮನ ಸೆಳೆದ ಉಪರಾಷ್ಟ್ರಪತಿ, ಅಂತಹ ಪತ್ರಿಕೋದ್ಯಮದ ತೊಡಗಿರುವವರು, ತಮ್ಮ ವೃತ್ತಿಗೆ ದೊಡ್ಡ ಅಪಚಾರ ಎಸಗುತ್ತಿದ್ದಾರೆ, ಏಕೆಂದರೆ ಪತ್ರಿಕೋದ್ಯಮದ ಮೂಲಾಧಾರ ಆಡಗಿರುವುದು ಸತ್ಯಾಸತ್ಯತೆ ಮತ್ತು ವಿಶ್ವಾಸಾರ್ಹತೆಯಲ್ಲಿ ಎಂದು ಅವರು  ಹೇಳಿದರು.

ಸಾರ್ವಜನಿಕ ಭಾಷಣಗಳಲ್ಲಿ ಗುಣಮಟ್ಟ ಕುಸಿಯುತ್ತಿರುವ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದ ವೆಂಕಯ್ಯ ನಾಯ್ಡು ಅವರು, ಶಾಸನ ಸಭೆಗಳಲ್ಲಿ ಮತ್ತು ಸಾರ್ವಜನಿಕ ಜೀವನದಲ್ಲಿ ತಮ್ಮ ಸದಸ್ಯರಿಗೆ ನೀತಿ ಸಂಹಿತೆಯನ್ನು ಅಳವಡಿಸಿಕೊಳ್ಳುವ ಮೂಲಕ ರಾಜಕೀಯ ಪಕ್ಷಗಳು ತಮ್ಮನ್ನು ತಾವು ಸ್ವಯಂ ನಿರ್ಬಂಧಿಸಿಕೊಳ್ಳುವಂತೆ ಮಾಡಬೇಕೆಂದರು. ತಮ್ಮ ರಾಜಕೀಯ ಎದುರಾಳಿಗಳ ಮೇಲೆ ವೈಯಕ್ತಿಕ ದಾಳಿ ಮಾಡದಂತೆ ಸಾರ್ವಜನಿಕ ಪ್ರತಿನಿಧಿಗಳಿಗೆ ಸಲಹೆ ನೀಡಿದರು. ಯಾವುದೇ ಲೋಪ ದೋಷಗಳನ್ನು ನಿವಾರಿಸಲು ಪಕ್ಷಾಂತರ ವಿರೋಧಿ ಕಾನೂನನ್ನು ಮರು ಪರಿಶೀಲಿಸುವಂತೆಯೂ ಅವರು ಕರೆ ನೀಡಿದರು.

ವಿಧಾನಮಂಡಲಗಳಲ್ಲಿ ಸದಸ್ಯರು ಚರ್ಚೆ, ಸಂವಾದ ನಡೆಸಿ ಅರ್ಥಪೂರ್ಣವಾಗಿ ನಿರ್ಣಯ ಕೈಗೊಳ್ಳಬೇಕು ಎಂದು ಒತ್ತಿ ಹೇಳಿದ ಉಪರಾಷ್ಟ್ರಪತಿ ಅವರು, ಮಾಧ್ಯಮಗಳು ಸಂಸತ್ತು ಮತ್ತು ವಿಧಾನಮಂಡಲಗಳಲ್ಲಿ ನಡೆಸುವ ರಚನಾತ್ಮಕ ಭಾಷಣಗಳನ್ನು ಪ್ರಮುಖವಾಗಿ ಪ್ರಸಾರ ಮಾಡಬೇಕೇ ಹೊರತು ಅಡ್ಡಿಪಡಿಸುವ ಪ್ರಸಂಗಗಳನ್ನಲ್ಲ ಎಂದರು. ಮಾಧ್ಯಮಗಳು, ಸಂಸತ್ತು ಮತ್ತು ಶಾಸನ ಸಭೆಗಳಲ್ಲಿ ಕಲಾಪಕ್ಕೆ ಅಡ್ಡಿಪಡಿಸುವವರಿಗೆ ಅನಗತ್ಯ ಗಮನ ನೀಡುವುದರ ಬಗ್ಗೆ ಮತ್ತು ಸುದ್ದಿಗಳನ್ನು ವೈಭವೀಕರಿಸುವ ಬಗ್ಗೆ ಅವರು ಎಚ್ಚರಿಕೆ ನೀಡಿದರು.

ಸಂಸದ ಪಿ.ಸಿ.ಮೋಹನ್, ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಕೆ. ಸದಾಶಿವ ಶಣೈ, ಬೆಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎಚ್.ವಿ. ಕಿರಣ್, ಬೆಂಗಳೂರು ಪ್ರೆಸ್ ಕ್ಲಬ್‌ನ ಉಪಾಧ್ಯಕ್ಷ ಎಸ್. ಶ್ಯಾಮ್ ಪ್ರಸಾದ್ , ಜಂಟಿ ಕಾರ್ಯದರ್ಶಿ ಆನಂದ ಬೈದನಮನೆ ಮತ್ತು ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBangalore Press ClubKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState NewsVice president Venkaiah Naiduಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡುಬೆಂಗಳೂರುಬೆಂಗಳೂರು ಪ್ರೆಸ್ ಕ್ಲಬ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಮಾನ ನಿಲ್ದಾಣಕ್ಕೆ ನನ್ನ ಬೇಡ ಎಂದು ಸಿಎಂ ಬೊಮ್ಮಾಯಿಗೆ ಯಡಿಯೂರಪ್ಪ ಪತ್ರ ಬರೆದಿದ್ದೇಕೆ?

Next Post

ದೇಶಕ್ಕಾಗಿ ದುಡಿಯುವವರ ಬೆನ್ನೆಲುಬಾಗಿ ನಿಲ್ಲಿ: ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಗಳ ಕರೆ

kalpa News

kalpa News

Next Post
ದೇಶಕ್ಕಾಗಿ ದುಡಿಯುವವರ ಬೆನ್ನೆಲುಬಾಗಿ ನಿಲ್ಲಿ: ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಗಳ ಕರೆ

ದೇಶಕ್ಕಾಗಿ ದುಡಿಯುವವರ ಬೆನ್ನೆಲುಬಾಗಿ ನಿಲ್ಲಿ: ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಗಳ ಕರೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL