ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪಠ್ಯಕ್ರಮದ ಭಾಗವಾಗಿ ಬೈಬಲ್ ಅನ್ನು ಅಧ್ಯಯನ ಮಾಡಲು ಒತ್ತಾಯಿಸಿದ್ದಕ್ಕಾಗಿ ಬೆಂಗಳೂರಿನ ಖಾಸಗಿ ಶಾಲೆಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ Minister B C Nagesh ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ನೋಂದಣಿಯಾಗಿರುವ ಯಾವುದೇ ಶಿಕ್ಷಣ ಸಂಸ್ಥೆಗಳು ಕರ್ನಾಟಕ ಶಿಕ್ಷಣ ಕಾಯ್ದೆಯ ವ್ಯಾಪ್ತಿಗೆ ಬರುತ್ತವೆ ಮತ್ತು ಪಠ್ಯಕ್ರಮದ ಭಾಗವಾಗಿ ಧಾರ್ಮಿಕ ಪುಸ್ತಕವನ್ನು ಅಧ್ಯಯನ ಮಾಡಲು ವಿದ್ಯಾರ್ಥಿಗಳನ್ನು ಒತ್ತಾಯಿಸುವಂತಿಲ್ಲ ಎಂದು ತಿಳಿಸಿದ್ದಾರೆ.
ಶಾಲೆಯ ವರ್ತನೆಯಿಂದ ಕರ್ನಾಟಕ ಶಿಕ್ಷಣ ಕಾಯ್ದೆಯ ಉಲ್ಲಂಘನೆಯಾಗಿದೆ. ಶಾಲೆಗಳಲ್ಲಿ ಧಾರ್ಮಿಕ ವಿಚಾರ ಬೋಧನೆ ಮಾಡುವಂತಿಲ್ಲ. ಹೀಗಾಗಿ ಶಾಲೆಯ ವಿರುದ್ಧ ನೊಟೀಸ್ ಜಾರಿ ಮಾಡಲು ಸೂಚನೆ ನೀಡಲಾಗಿದೆ ಎಂದರು.
Also read: ಸರ್ಕಾರ, ಸಂಘಟನೆಗೆ ಹೆಸರು ತರುವಂತಹ ಕೆಲಸಗಳನ್ನು ಸಚಿವರು ಮಾಡಬೇಕು: ರೇಣುಕಾಚಾರ್ಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post