No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸರ್ಕಾರ, ಸಂಘಟನೆಗೆ ಹೆಸರು ತರುವಂತಹ ಕೆಲಸಗಳನ್ನು ಸಚಿವರು ಮಾಡಬೇಕು: ರೇಣುಕಾಚಾರ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 27, 2022
in ಬೆಂಗಳೂರು ನಗರ
0
ಯು.ಟಿ. ಖಾದರ್ ರಾಜಕಾರಣಿಯಲ್ಲ, ಭಯೋತ್ಪಾದಕರಂತೆ ಮಾತನಾಡುತ್ತಿದ್ದಾರೆ: ರೇಣುಕಾಚಾರ್ಯ ಕಿಡಿ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕೇವಲ ನಾಮಾಕವಸ್ಥೆ ಹಾಗೂ ಕುರ್ಚಿ ಉಳಿಸಿಕೊಳ್ಳುವ ಬದಲು ಪಕ್ಷ, ಸರ್ಕಾರ ಮತ್ತು ಸಂಘಟನೆಗೆ ಹೆಸರು ತರುವಂತಹ ಕೆಲಸಗಳನ್ನು ಸಚಿವರು ಮಾಡಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ Renukacharya ಅವರು ಸಚಿವರ ವಿರುದ್ಧ ಕಿಡಿಕಾರಿದ್ದಾರೆ.

ಸಚಿವರಾದವರು ಉಸ್ತುವಾರಿ ವಹಿಸಿಕೊಂಡ ನಂತರ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಸಂಚರಿಸಿ ಪಕ್ಷ , ಸರ್ಕಾರ ಹಾಗೂ ಸಂಘಟನೆಗೆ ಹೆಸರು ತರುವ ಕೆಲಸ ಮಾಡಬೇಕು. ಕೇವಲ ಕುರ್ಚಿ ಮತ್ತು ಸ್ವಾರ್ಥ ಮುಖ್ಯವಾಗಬಾರದೆಂದು ಚಾಟಿ ಬೀಸಿದರು.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಸಂಪುಟದಲ್ಲಿರುವ ಕೆಲವು ಸಚಿವರು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಪಕ್ಷ ಸಂಘಟನೆ, ಪ್ರತಿಪಕ್ಷಗಳ ಆರೋಪಕ್ಕೆ ಪ್ರತ್ಯುತ್ತರ ಕೊಡಬೇಕು. ಆದರೆ ಕೆಲವು ಸಚಿವ ಕಾರ್ಯವೈಖರಿ ಸಮಾಧಾನ ತಂದಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಸಂಪುಟ ಎಂದ ಮೇಲೆ ಕೇವಲ ಮುಖ್ಯಮಂತ್ರಿಗಳು ಮಾತ್ರ ಜವಾಬ್ದಾರರು ಆಗಿರುವುದಿಲ್ಲ. ಅದಕ್ಕೆ ಸಚಿವರು ಸಹ ಜವಾಬ್ದಾರರು. ಇದರಲ್ಲಿ ಎಲ್ಲರ ಕರ್ತವ್ಯವೂ ಕೂಡ ಇರುತ್ತದೆ. ಪ್ರತಿಪಕ್ಷಗಳ ಆರೋಪಕ್ಕೆ ಕೆಲವರು ಏಕೆ ಉತ್ತರ ಕೊಡುತ್ತಿಲ್ಲ ಎಂದು ಪ್ರಶ್ನಿಸಿದರು.
ನಾಮಕಾವಸ್ಥೆ ಸಚಿವರಾಗುವುದರಲ್ಲಿ ಅರ್ಥವಿಲ್ಲ. ಜಿಲ್ಲೆಯಿಂದ ಹಿಡಿದು ತಾಲ್ಲೂಕು, ಹೋಬಳಿ ಮಟ್ಟದವರೆಗೂ ಓಡಾಡಿ ಕಾರ್ಯಕರ್ತರನ್ನು ಭೇಟಿ ಮಾಡಿ ಅವರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸಬೇಕೆಂದು ಹೇಳಿದರು.

ಕೇವಲ ಜಿಲ್ಲಾ ಮಟ್ಟ ವಿಧಾನಸೌಧದ ಮೂರನೇ ಮಹಡಿಗೆ ಮಾತ್ರ ಸೀಮಿತವಾಗಬಾರದು. ಈ ಹಿಂದೆ ನಾನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಂಪುಟದಲ್ಲಿ ಮೊದಲ ಬಾರಿಗೆ ಅಬಕಾರಿ ಸಚಿವನಾಗಿದ್ದೆ. ವಿಧಾನಸೌಧದಿಂದ ಹಿಡಿದು ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಮಟ್ಟದವರೆಗೂ ಕೆಲಸ ಮಾಡಿದ್ದೇನೆ. ಹಾಲಿ ಸಚಿವರು ಮುಖ್ಯಮಂತ್ರಿಗಳ ವೇಗಕ್ಕೆ ತಕ್ಕಂತೆ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರ, ಸಂಘಟನೆಗೆ ಬಲ ಬರುತ್ತದೆ ಎಂದು ತಿಳಿಸಿದರು.

ಅವಕಾಶ ಕೊಡಬೇಕಿತ್ತು: ಸಂಪುಟದಲ್ಲಿ ಐದು ಸ್ಥಾನಗಳು ಖಾಲಿ ಇದ್ದು, ಹೊಸಬರಿಗೆ ಮುಖ್ಯಮಂತ್ರಿಗಳು ಅವಕಾಶ ಕೊಡಬೇಕಿತ್ತು. ಕೆಲವು ಸಚಿವರ ಬಳಿ ಹೆಚ್ಚುವರಿ ಖಾತೆಗಳಿವೆ. ಇವುಗಳನ್ನೇ ಕೆಲವು ಶಾಸಕರಿಗೆ ನೀಡಿದ್ದರೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದರು ಎಂದರು.

ಕೇವಲ ನನಗೆ ಮಾತ್ರ ಸಚಿವ ಸ್ಥಾನ ಕೊಡಬೇಕಿತ್ತೆಂದು ನಾನು ಕೇಳುವುದಿಲ್ಲ. ಚುನಾವಣೆಗೆ ಒಂದು ವರ್ಷ ಬಾಕಿಯಿದೆ. ಸಂಪುಟಕ್ಕೆ ಸೇರ್ಪಡೆಯಾದರೆ ಇಲಾಖೆಯನ್ನು ತಿಳಿದುಕೊಳ್ಳಲು ಹಲವು ತಿಂಗಳುಗಳೇ ಬೇಕಾಗುತ್ತದೆ. ಅದಿಕಾರಿಗಳ ಪರಿಶೀಲನಾ ಸಭೆ, ಜಿಲ್ಲಾ ಹಾಗು ತಾಲ್ಲೂಕು ಮಟ್ಟದ ಸಭೆಗಳನ್ನು ಮಾಡಬೇಕು. ವಿಳಂಬ ಮಾಡುವುದರಲ್ಲಿ ಅರ್ಥವಿಲ್ಲ ಎಂದು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.

Also read: ಕೊರೋನಾ 4ನೆಯ ಅಲೆ ಭೀತಿ ನಡುವೆಯೂ ನಿಗದಿಯಂತೆ ಶಾಲೆಗಳು ಆರಂಭ: ಸಚಿವ ನಾಗೇಶ್

ಬೇರೆಯವರ ಬಳಿ ಇರುವ ಹೆಚ್ಚುವರಿ ಖಾತೆಗಳನ್ನು ಹಿಂಪಡೆದು ಹೊಸಬರಿಗೆ ನೀಡಿದ್ದರೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದರು. ಇದರಿಂದ ಸರ್ಕಾರ ಮತ್ತು ಸಂಘಟನೆಗೆ ಹೆಸರು ಬರುತ್ತಿತ್ತು. ಮುಖ್ಯಮಂತ್ರಿಗಳು ಏಕೆ ವಿಳಂಬ ಮಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಇಷ್ಟೊಂದುವ ವಿಳಂಬ ಮಾಡುವುದರಲ್ಲಿ ಅರ್ಥವೂ ಇಲ್ಲ ಎಂದರು.

ಕಡೆಪಕ್ಷ ಚುನಾವಣಾ ದೃಷ್ಟಿಯಿಂದಲಾದರೂ ಸಂಪುಟ ವಿಸ್ತರಣೆ ಮಾಡಲೇಬೇಕಿತ್ತು. ಇದು ಕೇವಲ ನನ್ನೊಬ್ಬನ ಅಭಿಪ್ರಾಯವಲ್ಲ. ಅನೇಕ ಶಾಸಕರ ಅಭಿಪ್ರಾಯವಾಗಿದೆ. ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಕಾರಿ. ವರಿಷ್ಠರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಭ್ರಷ್ಟಾಚಾರದ ಪಿತಾಮಹ: ಇದೇ ವೇಳೆ ರೇಣುಕಾಚಾರ್ಯ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಭ್ರಷ್ಟಾಚಾರದ ಪಿತಾಮಹ ‌:
ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆಯನ್ನೇ ಕಾಂಗ್ರೆಸ್ ಉಳಿಸಿಕೊಂಡಿಲ್ಲ. ಭ್ರಷ್ಟಾಚಾರದ ಪಿತಾಮಹರೇ ಕಾಂಗ್ರೆಸ್ ನಾಯಕರು. ನಮ್ಮ ಸರ್ಕಾರದ ವಿರುದ್ಧ ಮಾತನಾಡಲು ಯಾವುದೇ ಆರೋಪಗಳು ಇಲ್ಲದಿರುವುದರಿಂದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಹಲಾಲ್, ಹಿಜಾಬ್, ಹುಬ್ಬಳ್ಳಿ ಗಲಭೆಯನ್ನು ಸೃಷ್ಟಿಸಿದವರೇ ಕಾಂಗ್ರೆಸಿಗರು. ಬಿಜೆಪಿ ವಿರುದ್ಧ ಮಾತನಾಡಲು ಯಾವ ಅಸ್ತ್ರಗಳು ಇಲ್ಲದಿರುವುದರಿಂದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

ಸಂತೋಷ್ ಪಾಟೀಲ್ ಆತ್ಮಹತ್ಯೆ, ಗುತ್ತಿಗೆದಾರರ ಸಂಘದ ಆರೋಪ ಇವೆಲ್ಲವೂ ತನಿಖೆಯಿಂದ ಹೊರಬೀಳಲಿದೆ. ಪ್ರಧಾನಿಗೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ದೂರು ನೀಡಲು ಅದರ ಕರಡು ಸಿದ್ದವಾಗಿದ್ದೇ ಕಾಂಗ್ರೆಸ್ ನಾಯಕರ ಮನೆಯಲ್ಲಿ. ಇದರ ಎಲ್ಲ ಕಿಂಗ್‍ಪಿನ್‍ಗಳು ಕಾಂಗ್ರೆಸ್‍ನವರೇ. ತನಿಖೆ ನಡೆದ ಮೇಲೆ ಕಾಂಗ್ರೆಸ್‍ಗರ ಬಣ್ಣ ಬಯಲಾಗುತ್ತದೆ ಎಂದು ರೇಣುಕಾಚಾರ್ಯ ಎಚ್ಚರಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaRenukacharyaState Newsಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರೇಣುಕಾಚಾರ್ಯ
Share197Tweet123Send
Previous Post

ಕೊರೋನಾ 4ನೆಯ ಅಲೆ ಭೀತಿ ನಡುವೆಯೂ ನಿಗದಿಯಂತೆ ಶಾಲೆಗಳು ಆರಂಭ: ಸಚಿವ ನಾಗೇಶ್

Next Post

ಪಠ್ಯಕ್ರಮದ ಭಾಗವಾಗಿ ಬೈಬಲ್ ಅಧ್ಯಯನಕ್ಕೆ ಒತ್ತಾಯ: ಖಾಸಗಿ ಶಾಲೆಗೆ ನೋಟಿಸ್ ಜಾರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆಗಸ್ಟ್ 23ರಿಂದ 9ರಿಂದ 12ನೆಯ ತರಗತಿ ಆರಂಭ: ಶಿಕ್ಷಣ ಸಚಿವ ನಾಗೇಶ್

ಪಠ್ಯಕ್ರಮದ ಭಾಗವಾಗಿ ಬೈಬಲ್ ಅಧ್ಯಯನಕ್ಕೆ ಒತ್ತಾಯ: ಖಾಸಗಿ ಶಾಲೆಗೆ ನೋಟಿಸ್ ಜಾರಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತೀರ್ಥಹಳ್ಳಿ | ವೃದ್ಧೆ ಕೈ ಕಟ್ಟಿ, ಬಾಯಿಗೆ ಬಟ್ಟೆ ತುರುಕಿ 18 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ

ತೀರ್ಥಹಳ್ಳಿ | ವೃದ್ಧೆ ಕೈ ಕಟ್ಟಿ, ಬಾಯಿಗೆ ಬಟ್ಟೆ ತುರುಕಿ 18 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ

April 23, 2026
ಮೈಸೂರು | ಭಕ್ತಿ ಭಾವದ ಕ್ಷೇತ್ರ-ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರ | 23ರಿಂದ 8ನೇ ವಾರ್ಷಿಕೋತ್ಸವ ಸಂಭ್ರಮ

ಮೈಸೂರು | ಭಕ್ತಿ ಭಾವದ ಕ್ಷೇತ್ರ-ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರ | 23ರಿಂದ 8ನೇ ವಾರ್ಷಿಕೋತ್ಸವ ಸಂಭ್ರಮ

April 22, 2026
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ನಾಲ್ಕು ಸಾವು : ಸಚಿವ ಮಧುಬಂಗಾರಪ್ಪ

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ನಾಲ್ಕು ಸಾವು : ಸಚಿವ ಮಧುಬಂಗಾರಪ್ಪ

April 22, 2026
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ: ಶಿಕ್ಷಣ ಸಚಿವ ಮಧುಬಂಗಾರಪ್ಪ

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ: ಶಿಕ್ಷಣ ಸಚಿವ ಮಧುಬಂಗಾರಪ್ಪ

April 22, 2026
ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

April 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL