ಕಲ್ಪ ಮೀಡಿಯಾ ಹೌಸ್ | ಪುಲ್ವಾಮಾ |
ವಲಸೆ ಕಾರ್ಮಿಕರ ಮೇಲೆ ನಡೆದ ದಾಳಿ ಪ್ರಕರಣದಲ್ಲಿ ಭಾಗಿಯಾಗಿದ್ದರು ಎನ್ನಲಾದ ಇಬ್ಬರು ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ Pulwama ಭಾರತೀಯ ಸೇನಾಪಡೆ Indian army ಎನ್ಕೌಂಟರ್ ನಡೆಸಿ, ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಪುಲ್ವಾಮಾದ ಮಿತ್ರಿಗಾಮ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಬುಧವಾರ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಇದರಂತೆ ನಿನ್ನೆ ಓರ್ವ ಉಗ್ರನನ್ನು ಹತ್ಯೆ ಮಾಡಿತ್ತು. ಸ್ಥಳದಲ್ಲಿ ಇನ್ನು ಕೆಲ ಉಗ್ರರು ಅಡಗಿ ಕುಳಿತಿದ್ದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮುಂದುವರೆಸಿತ್ತು. ಇಂದು ಬೆಳಿಗ್ಗೆ ಮತ್ತೋರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಪೊಲೀಸರು ಹೇಳಿದ್ದಾರೆ.
Also read: ಧಾರವಾಡ: ತಂದೆಯನ್ನೇ ಕೊಲೆಗೈದ ಮಗ! ಕಾರಣವೇನು ಗೊತ್ತಾ? ಇಲ್ಲಿದೆ ಮಾಹಿತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post