ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಭದ್ರಾವತಿ |
ಜಿಲ್ಲಾ ಕೇಂದ್ರ ಶಿವಮೊಗ್ಗ, ಭದ್ರಾವತಿ ಸೇರಿದಂತೆ ಜಿಲ್ಲೆ ಹಲವೆಡೆ ಇಂದು ಸಂಜೆ ವೇಳೆಗೆ ಭಾರೀ ಮಳೆ ಸುರಿದಿದೆ.
Also read: ಕುವೆಂಪು ವಿವಿ ಅಧ್ಯಾಪಕೇತರ ನೌಕರರ ಸಂಘದವರು ಪ್ರತಿಭಟನೆ ನಡೆಸಿದ್ದೇಕೆ?
ಸಂಜೆ ನಾಲ್ಕು ಗಂಟೆ ನಂತರ ಶಿವಮೊಗ್ಗ ನಗರದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದ್ದು, ಹಲವು ಕಡೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಸುಮಾರು ಮುಕ್ಕಾಲು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದು, ಬಿಸಿಲಿನಿಂದ ಬಳಲಿ ಹೋಗಿದ್ದ ಸಿಹಿಮೊಗೆಯ ಮಂದಿಗೆ ಇದು ಕೊಂಚ ತಂಪನೆರೆಯಿತು.
Also Read: ಮೇ 15ರಿಂದ ಭದ್ರಾ ನಾಲೆಗಳಿಗೆ ನೀರು ಬಂದ್: ಪವಿತ್ರಾ ರಾಮಯ್ಯ
ಇನ್ನು, ಉಕ್ಕಿನ ನಗರಿ ಭದ್ರಾವತಿಯಲ್ಲೂ ಸಹ ಸಂಜೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ವರುಣ ಅಬ್ಬರಿಸಿದ್ದಾರೆ.
ಗುಡುಗು, ಸಿಡಿಲು, ಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಹಲವು ಕಡೆಗಳಲ್ಲಿ ವರುಣನ ಅಬ್ಬರಕ್ಕೆ ಮನೆಗಳಿಗೆ ಕಿಟಕಿಗಳಿಗೆ ನೀರು ನುಗ್ಗುವಷ್ಟು ರಭಸದ ಮಳೆ ಸುರಿದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post