ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮೇ 3 ರಂದು ಬಹುತೇಕವಾಗಿ ಕೇಂದ್ರ ಸಚಿವ ಅಮಿತ್ ಷಾ Union Minister Amith Shah ಅವರು ಬೆಂಗಳೂರಿಗೆ ಆಗಮಿಸುತ್ತಿದ್ದು, ಅವಕಾಶ ಪಡೆದು ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.
ಅವರು ಇಂದು ಜೆ.ಎಸ್.ಗ್ರೂಪ್ ಆಫ್ ಕಂಪನಿ ಆಯೋಜಿಸಿದ್ದ ನೂತನಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ದೆಹಲಿಯಲ್ಲಿ ಮುಖ್ಯಮಂತ್ರಿಗಳ ಹಾಗೂ ಸಿ.ಜೆಗಳ ಸಮ್ಮೇಳನದಲ್ಲಿ ಭಾಗವಹಿಸಲು ತೆರಳುತ್ತಿದ್ದು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿಲ್ಲ. ವರಿಷ್ಠರು ಸೂಕ್ತ ಸಮಯದಲ್ಲಿ ನಿರ್ಧಾರ ಮಾಡುವುದಾಗಿ ಹೇಳಿದ್ದಾರೆ ಎಂದರು.
Also read: ಮೇ ತಿಂಗಳಿನಲ್ಲಿ ಬ್ಯಾಂಕುಗಳು ಎಷ್ಟು ದಿನ ಕಾರ್ಯ ನಿರ್ವಹಿಸುವುದಿಲ್ಲ ಗೊತ್ತಾ? ಇಲ್ಲಿದೆ ಮಾಹಿತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post