ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತರ ನೆರವಿಗೆ ಧಾವಿಸಿರುವುದು ಶಾಸಕ ಜಮೀರ್ ಅಹಮದ್ ಹಾಗೂ ಅವರ ಪಕ್ಷದ ನಿಲುವು. ಗಲಭೆ ಮಾಡಿದವರ ಜೊತೆ ನಿಲ್ಲುವ ಕೆಲಸವನ್ನು ಮೊದಲಿನಿಂದಲೂ ಮಾಡಿಕೊಂಡೇ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Also Read: ಭದ್ರಾವತಿ ಟಿವಿ ಕೇಬಲ್’ನಲ್ಲಿ ವಿದ್ಯುತ್ ಹರಿದು 4 ವರ್ಷದ ಮಗು ಸಾವು
ನವದೆಹಲಿಗೆ ಆಗಮಿಸಿ ಕರ್ನಾಟಕ ಭವನದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಹುಬ್ಬಳ್ಳಿ ಪ್ರಕರಣದಲ್ಲಿ ಶಾಸಕ ಜಮೀರ್ ಅಹಮದ್ ಖಾನ್ ಅವರು ಬಂಧಿತರ ನೆರವಿಗೆ ಧಾವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಮೊದಲ ಬಾರಿ ಏನಲ್ಲ. ಡಿಜೆ ಹಳ್ಳಿ ಕೆಜೆ ಹಳ್ಳಿ ಪ್ರಕರಣದಲ್ಲಿಯೂ ಅದನ್ನೇ ಮಾಡಿದ್ದರು. ಅದು ಅವರ ಮತ್ತು ಅವರ ಪಕ್ಷದ ನಿಲುವು. ಅವರು ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ಅವರ ನಾಯಕರು ಅದರ ಬಗ್ಗೆ ಯಾವುದೇ ಸ್ಪಷ್ಟೀಕರಣ ಕೂಡ ನೀಡದೇ ಇರುವುದರಿಂದ ಅವರ ನಿಲುವು ತಿಳಿಯುತ್ತದೆ ಎಂದರು.
Also Read: ಅಂತರಂಗದ ಅಭಿವ್ಯಕ್ತಿತನ ಕೌಶಲ್ಯಯುಕ್ತ ಬದುಕಿಗೆ ಪ್ರೇರಕ: ಶ್ರೀರಂಜಿನಿ ದತ್ತಾತ್ರಿ ಅಭಿಮತ
ಕೇಂದ್ರ ಗೃಹ ಸಚಿವರು ರಾಜ್ಯಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಪಿಎಫ್’ಐ, ಎಸ್’ಡಿಪಿಐ ಸಂಘಟನೆಗಳನ್ನು ಬ್ಯಾನ್ ಮಾಡುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅಲ್ಲಿ ಚರ್ಚೆಯಾಗುವುದಿಲ್ಲ. ಪಿಎಫ್’ಐ ಕರ್ನಾಟಕದಲ್ಲಿ ಮಾತ್ರವಲ್ಲ ಅವರ ಚಟುವಟಿಕೆಗಳು ಸೀಮಿತವಾಗಿಲ್ಲ. ಉತ್ತರಪ್ರದೇಶ, ಕೇರಳ ಮಹಾರಾಷ್ಟ್ರದಲ್ಲಿಯೂ ಇದೆ. ಅದರ ಸಮಗ್ರ ಚಟುವಟಿಕೆಗಳ ಗೃಹ ಇಲಾಖೆ ಕ್ರಮ ಕೈಗೊಳ್ಳುತ್ತದೆ ಎಂದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post