ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭದ್ರಾವತಿ ಗ್ರಾಮ ಹಳೇನಗರದ ಶ್ರೀ ಹಳದಮ್ಮ ದೇವಿಯ ಜಾತ್ರಾಮಹೋತ್ಸವ ಮೇ 3ರಿಂದ 8ರವರೆಗೆ 6 ದಿನಗಳ ಕಾಲ ನಡೆಯಲಿದೆ.
ಮೇ 3ರಂದು ಬೆಳಗ್ಗೆ 9ಗಂಟೆಗೆ ಅಭಿಷೇಕ, ಮಹಾಮಂಗಳಾರತಿ ಹಾಗೂ ರಾತ್ರಿ 8 ಗಂಟೆಗೆ ರಾಜಬೀದಿ ಉತ್ಸವ ನಡೆಯಲಿದ್ದು, ಸಂಸದ ಬಿ.ವೈ ರಾಘವೇಂದ್ರ, ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ತಹಸೀಲ್ದಾರ್ ಆರ್. ಪ್ರದೀಪ್, ನಗರಸಭೆ ಸದಸ್ಯರಾದ ಶಶಿಕಲಾ ನಾರಾಯಣಪ್ಪ, ಅನುಪಮ ಚನ್ನೇಶ್, ಆರ್. ಶ್ರೇಯಸ್(ಚಿಟ್ಟೆ), ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರರು ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಪ್ರತಿ 2 ವರ್ಷಕ್ಕೊಮ್ಮೆ ಶ್ರೀ ದೇವಿಯ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಸಿಡಿ ಉತ್ಸವ ಎಲ್ಲರನ್ನು ಆಕರ್ಷಿಸುತ್ತದೆ. ನಗರ ಹಾಗು ಗ್ರಾಮಾಂತರ ಭಾಗಗಳಿಂದ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಾರೆ. ಇದರೊಂದಿಗೆ ಸಾಂಪ್ರದಾಯಿಕ ಕುಸ್ತಿ ಪಂದ್ಯಾವಳಿ ಸಹ ಆಯೋಜಿಸಿಕೊಂಡು ಬರಲಾಗುತ್ತಿದೆ. ರಾಷ್ಟ್ರ ಹಾಗು ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಳ್ಳುವುದು ವಿಶೇಷವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post