ಕಲ್ಪ ಮೀಡಿಯಾ ಹೌಸ್ | ಮುಂಡಗೋಡ |
ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಸಾರಿಗೆ ಸಚಿವರಾದ ಬಿ. ಶ್ರೀರಾಮುಲು Minister B Shriramulu ಅವರೊಂದಿಗೆ ಪಟ್ಟಣದ ಎಪಿಎಂಸಿ ಬಳಿ ನೂತನ ಬಸ್ ಡಿಪೋ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
4 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಬಸ್ ಡಿಪೋವನ್ನು ನಿರ್ಮಿಸಲಾಗುತ್ತಿದ್ದು, ಶಿವರಾಮ ಹೆಬ್ಬಾರ್ ಅವರ ಅವಿರತ ಪ್ರಯತ್ನದ ಫಲವಾಗಿ ತಾಲೂಕಿನ ಬಹುಕಾಲದ ಬೇಡಿಕೆಯಾದ ನೂತನ ಬಸ್ ಡಿಪೋ ಸಾಕಾರವಾಗುತ್ತಿದೆ. ಇದರಿಂದ ಸಾಕಷ್ಟು ಪ್ರಯಾಣಿಕರಿಗೆ ಅನುಕೂಲವಾಗಲಿದೆ.
ಭೂಮಿ ಪೂಜೆ ಸಮಾರಂಭದಲ್ಲಿ ವಾಯವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ವಿ.ಎಸ್.ಪಾಟೀಲ್, ಮಂಡಲಾಧ್ಯಕ್ಷ  ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರವಿಗೌಡ ಪಾಟೀಲ್, ಎಲ್.ಟಿ. ಪಾಟೀಲ್, ಸಾರಿಗೆ ಇಲಾಖೆಯ ಅಧಿಕಾರಿಗಳು, ಪ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸ್ಥಳೀಯ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 
	    	





 Loading ...
 Loading ... 
							



 
                
Discussion about this post