ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಮತ್ತು ಮಾಚೇನಹಳ್ಳಿ ಕೈಗಾರಿಕಾ ವಸಹಾತು ಸಂಘದ ಪದಾಧಿಕಾರಿಗಳು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳನ್ನು ಹಾಗೂ ತಾಲ್ಲೂಕು ದಂಡಾಧಿಕಾರಿಗಳನ್ನು ಭೇಟಿಯಾಗಿ ಮಾಚೇನಹಳ್ಳಿ ಕೈಗಾರಿಕಾ ವಸಹಾತು ಪ್ರದೇಶದಲ್ಲಿ ರಾಶಿರಾಶಿಯಾಗಿ ಬಿದ್ದಿರುವ ಘನ-ತ್ಯಾಜ್ಯ ವಸ್ತುಗಳಿಂದ ಪರಿಸರದ ಮೇಲೆ ಆಗುತ್ತಿರುವ ದುಷ್ಪರಿಣಾಮ ಮತ್ತು ಕೈಗಾರಿಕಾ ಘನ-ತ್ಯಾಜ್ಯವಸ್ತುಗಳ ವಿಲೇವಾರಿ ಸಂಬಂಧ ವಿವರಣೆಯೊಂದಿಗೆ ಚರ್ಚಿಸಿ ಮನವಿ ಸಲ್ಲಿಸಲಾಯಿತು.
ಅದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಉಪಯೋಗವಾಗದಿರುವ ಕ್ವಾರಿ ಜಾಗವನ್ನು ಗುರುತಿಸಿ ಕೈಗಾರಿಕಾ ಘನ-ತ್ಯಾಜ್ಯ ವಿಲೇವಾರಿಗೆ ಸೂಕ್ತ ಜಾಗವನ್ನು ಕೊಡಲು ಕ್ರಮಕೈಗೊಳ್ಳುವುದಾಗಿ ಸಮ್ಮತಿಸಿದರು.
Also read: ಸ್ವಸ್ಥ ಸಮಾಜ ನಿರ್ಮಿಸಲು ಕ್ರಾಂತಿಕಾರಿ ಚಳುವಳಿಗೆ ಕಾರಣರಾದ ಬಸವಣ್ಣ ನಿಜವಾದ ದಾರ್ಶನಿಕ: ಪ್ರೊ. ಹಿ. ಚಿ. ಬೋರಲಿಂಗಯ್ಯ
ಬೇಟಿ ನೀಯೋಗದ ನೇತೃತ್ವವನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ವಹಿಸಿದ್ದು, ಮಾಚೇನಹಳ್ಳಿ ಕೈಗಾರಿಕಾ ವಸಹಾತು ಸಂಘದ ಅಧ್ಯಕ್ಷರಾದ ಎಂ.ಎ. ರಮೇಶ್ ಹೆಗಡೆ, ಕೈಗಾರಿಕಾಭಿವೃದ್ದಿ ಸಲಹಾ ಸಮಿತಿ ಛೇರ್ಮನ್ ಎಂ. ರಾಜು, ಸಹ-ಕಾರ್ಯದರ್ಶಿ ಜಿ. ವಿಜಯಕುಮಾರ್, ನಿರ್ದೇಶಕರಾದ ಪ್ರದೀಪ್ ವಿ. ಯೆಲಿ ಮುಂತಾದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post