No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Sunday, March 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕನ್ನಡಿಗರ ಪರ ಗಟ್ಟಿ ನಿಲುವು ಹೊಂದಿದ್ದ ನೈಜ ನಾಯಕ ಅನಂತಕುಮಾರ್: ಸಿಎಂ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 6, 2022
in ಬೆಂಗಳೂರು ನಗರ
0
ಕನ್ನಡಿಗರ ಪರ ಗಟ್ಟಿ ನಿಲುವು ಹೊಂದಿದ್ದ ನೈಜ ನಾಯಕ ಅನಂತಕುಮಾರ್: ಸಿಎಂ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕೇಂದ್ರದ ಮಾಜಿ ಸಚಿವರಾಗಿದ್ದ ದಿವಂಗತ ಅನಂತ್ ಕುಮಾರ್ Ananth Kumar ಅವರು ರಾಜ್ಯದ ನೆಲ ಜಲ ವಿಷಯಗಳಲ್ಲಿ ರಾಜ್ಯ ಹಾಗೂ ಕನ್ನಡ ಜನರ ಪರ ಗಟ್ಟಿ ನಿಲುವು ಹೊಂದಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಹೇಳಿದರು.

ಅವರು ಇಂದು ಬೆಂಗಳೂರಿನ ಜಯನಗರ ಬಡಾವಣೆಯ ಅನಂತ್ ಕುಮಾರ್ ಅವರ ಕಚೇರಿಯಲ್ಲಿ ಅನಂತ ಪ್ರೇರಣಾ Anantha Prerana ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.

ಬೆಂಗಳೂರಿನ ಮೆಟ್ರೋ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗ, ಕೃಷ್ಣಾ ಮೇಲ್ದಂಡೆ ಯೋಜನೆ, ಕಾವೇರಿ ಜಲ ವಿಷಯದಲ್ಲಿ ಬಿಗಿ ನಿಲುವಿನಿಂದ ರಾಜ್ಯಕ್ಕೆ ಪರಿಹಾರ ಕೊಡಿಸುವಲ್ಲಿ ಅನಂತಕುಮಾರ್ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರು ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ. ಕೇಂದ್ರದಿಂದ ಆಗಬೇಕಾದ ಬೆಂಗಳೂರಿನ ಹಾಗೂ ರಾಜ್ಯದ ಎಲ್ಲ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಹಕಾರ ನೀಡಿದ್ದರು ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಅತ್ಯಂತ ಆತ್ಮೀಯ ಸ್ನೇಹಿತರಾಗಿದ್ದ ಅವರ ಸ್ಥಾನಮಾನಗಳು ನಮ್ಮೊಂದಿಗಿನ ಸ್ನೇಹವನ್ನು ಬದಲಾಯಿಸಿರಲಿಲ್ಲ. ಕೃಷ್ಣಾ ಟ್ರಿಬ್ಯುನಲ್ ವಿಚಾರದಲ್ಲಿ ಸರ್ವೋಚ್ಛ ನ್ಯಾಯಾಲಯದಲ್ಲಿ ನ್ಯಾಯ ಸಮ್ಮತವಾಗಿ ಕರ್ನಾಟಕದ ಪರವಾಗಿ ಹೋರಾಟ ಮಾಡಿ ಕರ್ನಾಟಕದ ಹಿತ ಕಾಪಾಡಿದ್ದಾರೆ. ಆ ಮೂಲಕ ರಾಜ್ಯದ ಆಪತ್ತನ್ನು ಅವರು ತಪ್ಪಿಸಿದರು ಎಂದರು.

ಸಾರ್ವಜನಿಕ ಹೋರಾಟದ ಅತ್ಯಂತ ಆತ್ಮೀಯ ಸಂಗಾತಿ :
ನನ್ನ ಸಾರ್ವಜನಿಕ ಹೋರಾಟದ ಅತ್ಯಂತ ಆತ್ಮೀಯ ಸಂಗಾತಿ, ಜನಮೆಚ್ಚಿದ ನಾಯಕರಾದ ಅನಂತಕುಮಾರ್ ಅವರು ಎಲ್ಲರಿಗೂ ಪ್ರೇರಣೆ. ಕನಾಟಕ ಎಂದು ಕೂಡ ಅನಂತಕುಮಾರ್ ಅವರನ್ನು ಮರೆಯಲು ಸಾಧ್ಯವಿಲ್ಲ. ನಮ್ಮ ಬದುಕಿನಲ್ಲಿ ಅವರು ಅನಂತವಾಗಿದ್ದಾರೆ ಎಂದು ತಿಳಿಸಿದರು.

Also read: ಸಂತೇಕಡೂರು: ವಿವಿಧ ನಿರ್ಮಾಣ ಕಾಮಗಾರಿಗಳಿಗೆ ಪವಿತ್ರ ರಾಮಯ್ಯ ಚಾಲನೆ

ಅನಂತಕುಮಾರ್ ಒಬ್ಬ ನೈಜ ನಾಯಕ:
ಅನಂತಕುಮಾರ್ ಒಬ್ಬ ನೈಜ ನಾಯಕ. ಯಾವುದೇ ಸ್ಥಿತಿಯಲ್ಲಿ, ಹಂತದಲ್ಲಿ ನಾಯಕತ್ವವನ್ನು ವಹಿಸುವ ನೈಜ ನಾಯಕ ಎನಿಸಿಕೊಳ್ಳುತ್ತಾರೆ. ವಿದ್ಯಾರ್ಥಿ ದೆಸೆಯಿಂದ ವಿದ್ಯಾರ್ಥಿ ಆಂದೋಲನದಲ್ಲಿ, ಮುಂದೆ ಎಬಿವಿಪಿ ಸಂಘಟನೆಗಳಲ್ಲಿ ನಾಯಕತ್ವ ವಹಿಸಿದರು. ಭಾರತೀಯ ಜನತಾ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ನಾಯಕತ್ವ ವಹಿಸಿದರು. ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಬಲಪಡಿಸುವುದರಲ್ಲಿ ನಾಯಕತ್ವ ವಹಿಸಿದರು. ಹತ್ತು ಜನ ಇದ್ದಾಗಲೂ, ಹತ್ತು ಲಕ್ಷ ಜನ ಇದ್ದಾಗಲೂ ನಾಯಕತ್ವ ವಹಿಸಿದ್ದರು. ಬಹಳ ಅಪರೂಪದ ನಾಯಕತ್ವ ಅವರದ್ದು ಎಂದರು.

ಆತ್ಮೀಯ ಒಡನಾಟ:
ಯಾವ ಉದ್ದೇಶಕ್ಕಾಗಿ ಬದುಕು ನಡೆಸಿದರೊ ಅದಕ್ಕಾಗಿ ಅವರು ಹೋರಾಟವನ್ನು ಮಾಡಿದವರು ಅನಂತ ಕುಮಾರ್. ಚಿಕ್ಕಂದಿನಿಂದಲೂ ನಮ್ಮಿಬ್ಬರ ಸ್ನೇಹವಿತ್ತು. ಅವರು ನನ್ನ ಸಹಪಾಠಿಗಳಾಗಿದ್ದರು. ನಮ್ಮ ಮಧ್ಯೆ ಆತ್ಮೀಯ ಒಡನಾಟವಿತ್ತು. ನಮ್ಮ ನಡುವೆ ಯಾರೇ ಕಾಲೇಜಿಗೆ ತಡವಾಗಿ ಹೋದರೂ ಒಬ್ಬರು ಬೆಂಚನ್ನು ಕಾಯ್ದಿರಿಸುತ್ತಿದ್ದೆವು. ತುರ್ತು ಪರಿಸ್ಥಿತಿ ಘೋಷಣೆಯಾದ ಸಂದರ್ಭದಲ್ಲಿ ವಿದ್ಯಾರ್ಥಿ ಕ್ರಿಯಾ ಸಮಿತಿ ರೂಪಿಸಿ ಅನಂತ ಕುಮಾರ್ ಅವರನ್ನು ಕಾರ್ಯದರ್ಶಿಗಳನ್ನಾಗಿ ಮಾಡಿದೆವು. ತುರ್ತು ಪರಿಸ್ಥಿತಿ ವಿರುದ್ಧ ದೊಡ್ಡ ಪ್ರಮಾಣದ ಹೋರಾಟ ಮಾಡುವಂತಿರಲಿಲ್ಲ. ಆದರೆ ಅಂಥ ಸಂದರ್ಭದಲ್ಲಿಯೂ ನೂರಾರು ವಿದ್ಯಾರ್ಥಿಗಳನ್ನು ಸೇರಿಸಿ ದೊಡ್ಡ ಹೋರಾಟ ಮಾಡಲಾಯಿತು. ಲಾಠಿ ಚಾರ್ಜ್ ಆಗಿ ಪೊಲೀಸರು ಅನಂತ ಕುಮಾರ್ ಅವರನ್ನು ಬಂಧಿಸಿದರು. ಇದರಿಂದಾಗಿ ಒಂದು ವರ್ಷ ವಿದ್ಯಾರ್ಥಿ ಜೀವನ ವ್ಯರ್ಥವಾಯಿತು. ನಂತರ ಕಾನೂನಿನ ವಿದ್ಯಾರ್ಥಿಯಾದರು. ಆ ಸಂದರ್ಭಗಳಲ್ಲಿ ಅವರಲ್ಲಿ ನಾಯಕತ್ವದ ವಿಚಾರ ಹಾಗೂ ಗುಣಗಳನ್ನು ಅವರಲ್ಲಿ ಕಂಡೆ. ದೂರದೃಷ್ಟಿ ಇದ್ದ ನಾಯಕರು ಅನಂತ ಕುಮಾರ್ ಎಂದರು.


ಪ್ರೀತಿಯ ಗಾಳ:

ಗಂಭೀರ ರಾಜಕಾರಣದ ಜೊತೆಗೆ ಹಾಸ್ಯ ಪ್ರಜ್ಞೆಯೂ ಅವರಲ್ಲಿತ್ತು. 30- 40 ವರ್ಷ ಒಟ್ಟಿಗಿದ್ದರೂ, ಒಂದು ದಿನವೂ ದುಃಖಿತರಾಗಿ ಅಥವಾ ಚಿಂತಾಕ್ರಾಂತರಾಗಿ ಎಂದೂ ಇರಲಿಲ್ಲ. ಎಂಥಾ ಸ್ಥಿತಿ ಎದುರಾದರೂ ಸ್ಥಿತಪ್ರಜ್ಞತೆಯಿಂದ ಎಲ್ಲವನ್ನೂ ಎದುರಿಸುತ್ತಿದ್ದರು. ನಗುನಗುತ್ತಾ ಇರುತ್ತಿದ್ದರು. ಸಮಸ್ಯೆಗಳನ್ನು ಬಗೆಹರಿಸಲು ಏನು ಮಾಡಬೇಕೋ ಅದನ್ನು ಮಾಡಬೇಕು ಎನ್ನುತ್ತಿದ್ದರು . ಇನ್ನೊಬ್ಬರಿಗೆ ಊಟ ಹಾಕಿಸುವುದರಲ್ಲಿ ಅವರಿಗೆ ಬಹಳ ಆಸಕ್ತಿ. ನನ್ನ ಬಗ್ಗೆ ಬಹಳ ಪ್ರೀತಿ. ಅವರ ಪ್ರೀತಿಯ ಗಾಳದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮಂತ್ರಿ ಸ್ಥಾನ ನಮ್ಮ ಸಂಬಂಧವನ್ನು ಎಂದೂ ಬದಲಾಯಿಸಲಿಲ್ಲ ಎಂದು ಸ್ಮರಿಸಿದರು.

ಶ್ರೀಮತಿ ತೇಜಸ್ವಿನಿ ಅನಂತಕುಮಾರ್ ಅವರ ಸಾಮಾಜಿಕ ಚಟುವಟಿಕೆಗಳು, ಅದಮ್ಯಚೇತನದ ಕೆಲಸ, ಸಸ್ಯಾಗ್ರಹ ಕಾರ್ಯಕ್ರಮ ಎಲ್ಲವೂ ಮುಂದುವರೆದಿರುವುದು ಶ್ಲಾಘನೀಯ. ಅನಂತಕುಮಾರ್ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಎಲ್ಲ ಸಹಕಾರ ನೀಡುತ್ತದೆ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Ananth KumarAnantha PreranaBangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState Newsಅನಂತ ಪ್ರೇರಣಾಅನಂತ್ ಕುಮಾರ್ಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share197Tweet123Send
Previous Post

ಸಂತೇಕಡೂರು: ವಿವಿಧ ನಿರ್ಮಾಣ ಕಾಮಗಾರಿಗಳಿಗೆ ಪವಿತ್ರ ರಾಮಯ್ಯ ಚಾಲನೆ

Next Post

ಸಾಮಾನ್ಯ ವ್ಯಕ್ತಿಗಳಿಗೆ ಸರಳವಾಗಿ ವೈದಿಕ ಸಂಪ್ರದಾಯವನ್ನು ಪರಿಚಯಿಸಿದವರು ಶಂಕರಾಚಾರ್ಯರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾಮಾನ್ಯ ವ್ಯಕ್ತಿಗಳಿಗೆ ಸರಳವಾಗಿ ವೈದಿಕ ಸಂಪ್ರದಾಯವನ್ನು ಪರಿಚಯಿಸಿದವರು ಶಂಕರಾಚಾರ್ಯರು

ಸಾಮಾನ್ಯ ವ್ಯಕ್ತಿಗಳಿಗೆ ಸರಳವಾಗಿ ವೈದಿಕ ಸಂಪ್ರದಾಯವನ್ನು ಪರಿಚಯಿಸಿದವರು ಶಂಕರಾಚಾರ್ಯರು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

March 28, 2026
ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

March 28, 2026
ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

March 28, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

March 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL