ಕಲ್ಪ ಮೀಡಿಯಾ ಹೌಸ್ | ಸೊರಬ |
ಬಹಿದರ್ಶೆಗೆ ಹೋದಾಗ ಪಕ್ಕದ ಮನೆಯ ಬಾವಿಗೆ ಕಾಲು ಜಾರಿ ಬಿದ್ದ ಘಟನೆ ಸೊರಬ ತಾಲ್ಲೂಕು ಹೊಸಬಾಳೆ ಗ್ರಾಮದಲ್ಲಿ ನಡೆದಿದೆ.
ಹನುಮಂತಪ್ಪ (48) ಬಾವಿಗೆ ಕಾಲು ಜಾರಿಬಿದ್ದ ವ್ಯಕ್ತಿಯಾಗಿದ್ದು, ಸುಮಾರು 60 ಅಡಿ ಆಳದ ಬಾವಿಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸತತ 2 ಗಂಟೆಗಳ ಕಾರ್ಯಾಚರಣೆ ನಡೆಸಿ ಹನುಮಂತಪ್ಪನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಅಗ್ನಿ ಶಾಮಕ ದಳದವರ ಕರ್ತವ್ಯಕ್ಕೆ ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಸಣ್ಣಪುಟ್ಟ ಗಾಯಗಳಾಗಿದ್ದ ಹನುಮಂತಪ್ಪ ಅವರನ್ನು ಚಿಕಿತ್ಸೆಗಾಗಿ ಸೊರಬ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯವಾಗಿದ್ದಾರೆ ಎನ್ನಲಾಗಿದೆ.
Also read: ನವಭಾರತಕ್ಕಾಗಿ ನವಕರ್ನಾಟಕದ ನಿರ್ಮಾಣದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ: ನಿರ್ಮಾಣ ಸಂಸ್ಥೆಗಳಿಗೆ ಸಿಎಂ ಕರೆ
ಓಂಕಾರ ಎಸ್. ವಿ. ತಾಳಗುಪ್ಪ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post