ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದಿನಿಂದ ಶಾಲೆಗಳು ಪುನಾರಂಭವಾಗಿದ್ದು, ಮಕ್ಕಳು ಉತ್ಸಾಹದಿಂದ ಶಾಲೆಗಳತ್ತ ಹೋಗುತ್ತಿದ್ದುದು ನೋಡುಗರ ಮನಸ್ಸಿಗೆ ಮುದ ನೀಡುವಂತಿತ್ತು.
ಕಳೆದ ಎರಡು ವರ್ಷಗಳಿಂದ ಕೊರೋನಾ ಹಿನ್ನೆಲೆಯಲ್ಲಿ ನಿಗದಿತ ಸಮಯಕ್ಕೆ ಶೈಕ್ಷಣಿಕ ವರ್ಷದ ತರಗತಿಗಳನ್ನು ಪ್ರಾರಂಭಿಸಲು ಸಾಧ್ಯವಾಗಿರಲಿಲ್ಲ. ಪ್ರಸಕ್ತ ವರ್ಷ ಕೊರೋನಾ ಉಲ್ಬಣ ಕಡಿಮೆಯಾಗಿರುವ ಕಾರಣ ಮಕ್ಕಳ ಕಲಿಕಾ ಚೇತರಿಕೆಗಾಗಿ ರಾಜ್ಯದಲ್ಲಿ ೧೫ ಮುಂಚಿತವಾಗಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ.

ಬೇಸಿಗೆ ರಜೆ ಮುಗಿಸಿ ಶಾಲೆಗೆ ಹಿಂತಿರುಗಿದ ಮಕ್ಕಳನ್ನು ಶಿಕ್ಷಕರು ಸಂತಸ, ಸಂಭ್ರಮದಿಂದ ಸ್ವಾಗತಿಸುತ್ತಿರುವುದು ಸಾಮಾನ್ಯವಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post