ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ BBMP 10,282 ರಸ್ತೆ ಗುಂಡಿಗಳನ್ನು ಗುರುತಿಸಲಾಗಿದ್ದು, ಇವುಗಳನ್ನು ಮುಚ್ಚಲು ಕನಿಷ್ಠ 15 ದಿನಗಳು ಬೇಕಾಗಬಹುದು ಎಂದು ವಿಶೇಷ ಆಯುಕ್ತ ರವೀಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 10,282 ಗುಂಡಿಗಳನ್ನು ಗುರುತಿಸಲಾಗಿದ್ದು, ಇದರಲ್ಲಿ 202 ಗುಂಡಿಗಳನ್ನು ಗಂಭೀರ ಸ್ವರೂಪದ್ದಾಗಿದ್ದು, ಇವುಗಳನ್ನು ಮುಚ್ಚಲು ಹೆಚ್ಚು ಸಮಯ ಬೇಕಾಗುತ್ತದೆ. ಮಳೆಗಾಲಕ್ಕೂ ಮುನ್ನ ಗುಂಡಿಗಳನ್ನು ಮುಚ್ಚಲು ಪ್ರಯತ್ನ ಮಾಡಲಾಗುತ್ತಿದ್ದು, ಕನಿಷ್ಠ 15 ದಿನ ಬೇಕಾಗುತ್ತದೆ ಎಂದಿದ್ದಾರೆ.
ಆ್ಯಪ್ ಮೂಲಕ ಬಂದ ದೂರುಗಳನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಆದಷ್ಟು ಶೀಘ್ರ ಗುಂಡಿ ಮುಚ್ಚುವ ಕಾಮಗಾರಿಯನ್ನು ಮುಕ್ತಾಯಗೊಳಿಸಲಾಗುವುದು ಎಂದಿದ್ದಾರೆ.
Also read: ನಮ್ಮ ರಕ್ಷಣೆಗಾಗಿ ತರಬೇತಿ ನೀಡಲಾಗಿದೆ, ಕಾನೂನು ಉಲ್ಲಂಘಿಸಿಲ್ಲ: ಈಶ್ವರಪ್ಪ ಸಮರ್ಥನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post