ಕಲ್ಪ ಮೀಡಿಯಾ ಹೌಸ್ | ಬೈಂದೂರು |
ಇಲ್ಲಿನ ಕಾಲ್ತೋಡು ಗ್ರಾಮದಲ್ಲಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದ ಪರಿಣಾಮ ಗ್ರಾಮ ಪಂಚಾಯತ್ ಅಧ್ಯಕ್ಷೆಯೊಬ್ಬರು ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ.
ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಶೆಟ್ಟಿ ಅವರು ಪಂಚಾಯತ್ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post