No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, May 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಾವಿರ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಡೇಟಾ ಸಾಕ್ಷರತೆಗೆ ಐಒಎ ಆಸಕ್ತಿ : 100 ಸರ್ಕಾರಿ ನೌಕರರಿಗೆ ಐಒಎ ಸದಸ್ಯತ್ವ

ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಜತೆ ಲಂಡನ್ ನಲ್ಲಿ ಮಾತುಕತೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 23, 2022
in ಬೆಂಗಳೂರು ನಗರ
0
ಸಾವಿರ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಡೇಟಾ ಸಾಕ್ಷರತೆಗೆ ಐಒಎ ಆಸಕ್ತಿ : 100 ಸರ್ಕಾರಿ ನೌಕರರಿಗೆ ಐಒಎ ಸದಸ್ಯತ್ವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಲಂಡನ್  |

ಕರ್ನಾಟಕದ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಓದುತ್ತಿರುವ ಆಯ್ದ 1,000 ವಿದ್ಯಾರ್ಥಿಗಳಿಗೆ ಡೇಟಾ ಸಾಕ್ಷರತೆಯನ್ನು ಒದಗಿಸಲು ಮತ್ತು ಶಾಲಾ ವಿದ್ಯಾರ್ಥಿಗಳ ಮಟ್ಟದಲ್ಲಿ ಸಂಪೂರ್ಣವಾಗಿ ಈ ಕಾರ್ಯಕ್ರಮವನ್ನು ವಿಸ್ತರಿಸಲು ಇಲ್ಲಿನ ಅನಲಿಟಿಕ್ಸ್ ಇನ್ಸ್ಟಿಟ್ಯೂಟ್ (ಐಒಎ) ತೀವ್ರ ಆಸಕ್ತಿ ವ್ಯಕ್ತಪಡಿಸಿದೆ.

ಇಲ್ಲಿ ನಡೆಯುತ್ತಿರುವ ವರ್ಲ್ಡ್ ಎಜುಕೆಷನ್ ಫೋರಂ ಸಮಾವೇಶದಲ್ಲಿ ಭಾಗವಹಿಸಲು ಬಂದಿರುವ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ Minister Ashwatha Narayana ಅವರನ್ನು ಭೇಟಿ ಆ ಸಂಸ್ಥೆಯ ಉನ್ನತಾಧಿಕಾರಿಗಳ ನಿಯೋಗ ಈ ವಿಚಾರವನ್ನು ಹಂಚಿಕೊಂಡಿದೆ.

ಸಚಿವರೊಂದಿಗೆ ಮಾತುಕತೆ ನಡೆಸಿದ ಅನಲಿಟಿಕ್ಸ್ ಐಒಎ ಪ್ರತಿನಿಧಿ ಡಾ.ಕ್ಲೇರ್ ವಾಲ್ಶ್, `ಈ ಕಾರ್ಯಕ್ರಮಗಳಿಗೆ ಸಂಸ್ಥೆಯು ವಿಶೇಷ ನಿಧಿಯನ್ನು ತಾನೇ ಹೊಂದಿಸಲಿದ್ದು, ಇದಕ್ಕಾಗಿ ಕರ್ನಾಟಕ ಸರಕಾರವು ಯಾವುದೇ ವೆಚ್ಚ ಮಾಡಬೇಕಾಗಿಲ್ಲ. ವಿದ್ಯಾರ್ಥಿಗಳ ಜತೆಗೆ ಸರಕಾರದ ಮಾಹಿತಿ ತಂತ್ರಜ್ಞಾನ (ಐಟಿ) ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೂ ನಮ್ಮ ಸಂಸ್ಥೆಯ ಸದಸ್ಯತ್ವ ನೀಡುವ ಮೂಲಕ ಅವರೆಲ್ಲ ತಮ್ಮ ಅನಲಿಟಿಕ್ಸ್ ಕೌಶಲ್ಯವನ್ನು ವೃದ್ಧಿಸಿಕೊಳ್ಳಲು ಡೇಟಾ ಸಾಕ್ಷರತೆ ಕಲಿಸುವುದು ನಮ್ಮ ಸದುದ್ದೇಶವಾಗಿದೆ’ ಎಂದರು.

Also read: ಜಲಾಶಯದ ಗೋಡೆ ಏರುವ ಹುಚ್ಚು ಸಾಹಸ: ಮೇಲಿನಿಂದ ಕೆಳಕ್ಕೆ ಜಾರಿ ಬಿದ್ದ ಯುವಕ

ಎಂಜಿನಿಯರಿಂಗ್ ಕಲಿಯುತ್ತಿರುವವರಿಗೆ ಅನಲಿಟಿಕ್ಸ್ ಜಾಣ್ಮೆ ಕಲಿಸುವುದು ಅಗತ್ಯವಾಗಿದೆ. ಈ ಮೂಲಕ ಐಒಎ ಸಾಮಾಜಿಕ ಜಾಲತಾಣಗಳಲ್ಲಿ ಹೇರಳ ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದು. ನಮ್ಮ ಸಂಸ್ಥೆಯು ವಿಶ್ವಾದ್ಯಂತ ಅನಲಿಟಿಕ್ಸ್ ಮತ್ತು ಡೇಟಾ ಸೈನ್ಸ್ ಅಧ್ಯಯನ, ಅನ್ವಯಿಕತೆ ಮತ್ತು ವ್ಯಾಪಕ ಪ್ರಸಾರಕ್ಕೆ ಕಟಿಬದ್ಧವಾಗಿದೆ ಎಂದು ವಾಲ್ಶ್ ತಿಳಿಸಿದರು.

ಅನಲಿಟಿಕ್ಸ್ ಮತ್ತು ಡೇಟಾ ಸೈನ್ಸ್ ಬಳಕೆಯನ್ನು ಕೇವಲ ಹೈ-ಟೆಕ್ ಉದ್ದಿಮೆಗಳಿಗೆ ಮಾತ್ರ ಸೀಮಿತಗೊಳಿಸಬಾರದು. ಬದಲಿಗೆ ಸರಕಾರಿ ಇಲಾಖೆಗಳಲ್ಲಿ ಕೂಡ ಇದನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಐಒಎ ಸಂಸ್ಥೆಯು ಕಾರ್ಪೊರೇಟ್ ಸದಸ್ಯತ್ವದ ಜತೆಗೆ ಕರ್ನಾಟಕ ಸರಕಾರದ ಉದ್ಯೋಗಿಗಳಿಗೆ ಉಚಿತವಾಗಿ 100 ಸದಸ್ಯತ್ವ ಕೊಡಲು ಸಿದ್ಧವಿದೆ ಎಂದು ಅವರು ಮನದಟ್ಟು ಮಾಡಿಕೊಟ್ಟರು.

ಕರ್ನಾಟಕ ಸರಕಾರದೊಂದಿಗೆ ಸಹಭಾಗಿತ್ವ ಹೊಂದಲು ಸಂಸ್ಥೆಯು ಹೊಂದಿರುವ ಆಸಕ್ತಿಯು 2022ರ ಬೆಂಗಳೂರು ತಂತ್ರಜ್ಞಾನ ಸಮಾವೇಶದ ಆಶಯಗಳಿಗೆ ತಕ್ಕಂತಿದೆ. ಈ ಮೂಲಕ ಅನಲಿಟಿಕ್ಸ್ ಮತ್ತು ಡೇಟಾ ಸೈನ್ಸ್ ಎರಡನ್ನೂ ಉಪಯೋಗಿಸುತ್ತಿರುವ ಐಟಿ, ಬಿಟಿ ಮತ್ತು ಡೀಪ್ ಟೆಕ್ ವಲಯದ ಅಗ್ರಗಣ್ಯ ಕಂಪನಿಗಳು ಮತ್ತು ನವೋದ್ಯಮಗಳನ್ನು ಬೆಸೆಯಬಹುದು. ಸಂಸ್ಥೆಯು ಭಾರತದಲ್ಲಿ ಅಂತಾರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮದೊಂದಿಗೆ (ಐಎಸ್ಡಿಸಿ) ಕೆಲಸ ಮಾಡುತ್ತಿದೆ ಎಂದು ವಾಲ್ಶ್ ಮಾಹಿತಿ ನೀಡಿದರು.

ಮಾತುಕತೆಯ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮದ (ಐಎಸ್ಡಿಸಿ) ಕಾರ್ಯನಿರ್ವಾಹಕ ನಿರ್ದೇಶಕ ಟಾಮ್ ಜೋಸೆಫ್, ಐಒಎ ಸದಸ್ಯತ್ವ ವಿಭಾಗದ ಮುಖ್ಯಸ್ಥೆ ರೋಸಿ ಸ್ವೀನಿ ಕೂಡ ಇದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

 

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLondonMinister Ashwatha NarayanaNewsinKannadaNewsKannadaState Newsಲಂಡನ್ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ
Share197Tweet123Send
Previous Post

ಜಲಾಶಯದ ಗೋಡೆ ಏರುವ ಹುಚ್ಚು ಸಾಹಸ: ಮೇಲಿನಿಂದ ಕೆಳಕ್ಕೆ ಜಾರಿ ಬಿದ್ದ ಯುವಕ

Next Post

ಮೇ 26ರಿಂದ ನಡೆಯಬೇಕಿದ್ದ ಕುವೆಂಪು ವಿವಿ ದೂರಶಿಕ್ಷಣ ಪರೀಕ್ಷೆಗಳು ಮುಂದೂಡಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಮೆರಿಕಾದ ಅಥೆನ್ಸ್ ವಿವಿಯೊಂದಿಗೆ ಶೈಕ್ಷಣಿಕ ಒಪ್ಪಂದಕ್ಕೆ ಸಹಿ‌ ಹಾಕಲಿರುವ ಕುವೆಂಪು ವಿವಿ

ಮೇ 26ರಿಂದ ನಡೆಯಬೇಕಿದ್ದ ಕುವೆಂಪು ವಿವಿ ದೂರಶಿಕ್ಷಣ ಪರೀಕ್ಷೆಗಳು ಮುಂದೂಡಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

ಮನೆ ಕಳ್ಳತನ ಪ್ರಕರಣ ತಡೆಗೆ `ಲಾಕ್ಡ್ ಹೌಸ್ ಬೀಟ್ ಸಿಸ್ಟಮ್’ ಜಾರಿಗೆ: ಎಸ್‌ಪಿ ನಿಖಿಲ್

May 1, 2026
ಬಳ್ಳಾರಿ | ಸಂಜೀವರಾಯ ದೇವಸ್ಥಾನದಲ್ಲಿ ವಿದುಷಿ ದಿವ್ಯಾ ಗಿರಿಧರ್ ಅದ್ಭುತ ಗಾಯನ

ಬಳ್ಳಾರಿ | ಸಂಜೀವರಾಯ ದೇವಸ್ಥಾನದಲ್ಲಿ ವಿದುಷಿ ದಿವ್ಯಾ ಗಿರಿಧರ್ ಅದ್ಭುತ ಗಾಯನ

May 1, 2026
ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

May 1, 2026
ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

May 1, 2026
ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

May 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL