ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಳೆಯಿಂದ ನಗರದ 3,453 ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದ್ದು, ಶನಿವಾರದಿಂದಲೇ ಸಂತ್ರಸ್ತರ ಬ್ಯಾಂಕ್ ಖಾತೆಗೆ ನೇರವಾಗಿ ತಲಾ ರೂ.25 ಸಾವಿರ ಪರಿಹಾರದ ಮೊತ್ತವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಶರತ್ ಅವರು ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತ ಮನಗಳಿಗೆ ತಲಾ ರೂ. 25 ಸಾವಿರ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆದೇಶಿಸಿದ್ದರು. ಅದರಂತೆ ಕಳೆದ ಮೂರು ದಿನಗಳಿಂದ ಬಿಬಿಎಂಪಿ ಅಧಿಕಾರಿ, ಸಿಬ್ಬಂದಿ ನೀರು ನುಗ್ಗಿದ ಮನೆಗಳನ್ನು ಮಹಜರು ಮಾಡಿ ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಸೇರಿದಂತೆ ಅಗತ್ಯ ದಾಖಲೆಗಳ ಪಡೆದಿದ್ದು, ಶನಿವಾರದಿಂದ ಪರಿಹಾರ ಮೊತ್ತವನ್ನು ಸಂತ್ರಸ್ತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಪೂರ್ವ ವಲಯದಲ್ಲಿ ಅತೀ ಹೆಚ್ಚು 714 ಮನೆಗಳು ಪ್ರವಾಹಕ್ಕೆ ತುತ್ತಾಗಿವೆ. ಬೊಮ್ಮನಹಳ್ಳಿ 147 ಮನೆಗಳಿಗೆ ಮಳೆ ನೀರು ನುಗ್ಗಿದೆ ತಲಾ ರೂ.25 ಸಾವಿರದಂತೆ 3,453 ಸಂತ್ರಸ್ತರಿಗೆ ಒಟ್ಟು ರೂ.8.63 ಲಕ್ಷ ಪರಿಹಾರ ವಿತರಿಸಲಾಗುವುದು ಎಂದು ತಿಳಿಸಿದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post