ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ B S Yadiyurappa ಪುತ್ರ ವಿಜಯೇಂದ್ರ Vijayendra ಅವರಿಗೆ ಪರಿಷತ್‌ಗೆ ಟಿಕೆಟ್ MLC BJP Ticket ಕೈ ತಪ್ಪಿದೆ.
ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಹೇಮಲತಾ ನಾಯಕ್, ಕೇಶವ ಪ್ರಸಾದ್, ಛಲವಾದಿ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ನೀಡಲಾಗಿದೆ. ಇದೇ ವೇಳೆ ವಿಧಾನ ಪರಿಷತ್‌ನ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿಗೆ ಟಿಕೆಟ್ ಲಭಿಸಿದೆ.
ಬಿಎಸ್‌ವೈ ಪುತ್ರನಿಗೆ ರಾಜಕೀಯ ಭವಿಷ್ಯ ಕಲ್ಪಿಸಲು ತೆರೆ ಮರೆಯ ಕಸರತ್ತನ್ನು ನಡೆಸಿದ್ದರೂ, ಪರಿಷತ್ ಪ್ರವೇಶ ಪಡೆದು ಸಂಪುಟದಲ್ಲಿ ಅವಕಾಶ ಪಡೆದುಕೊಳ್ಳಬೇಕೆಂದು ಬಯಸಿದ್ದ ಬಿ.ವೈ. ವಿಜಯೇಂದ್ರ ಅವರ ಕನಸು ನುಚ್ಚುನೂರಾಗಿದೆ.
Also read: ನವಯುವತಿ ಎಂದು ನಂಬಿ ಆಂಟಿಯಿಂದ 3 ಲಕ್ಷ ರೂ. ವಂಚನೆಗೆ ಒಳಗಾದ ಯುವಕ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post