ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಷ್ಟ್ರಕವಿ ಕುವೆಂಪು ಅವರ ಕುರಿತು ಪಾಠ ಇರುವ 4ನೇ ತರಗತಿ ‘ಪರಿಸರ ಅಧ್ಯಯನ’ ಪುಸ್ತಕದ ಪರಿಷ್ಕರಣೆ ಆಗಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ Minister B C Nagesh ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರಕವಿ ಕುವೆಂಪು ಅವರ ಕುರಿತು ಪಾಠ ಇರುವ 4ನೇ ತರಗತಿ ‘ಪರಿಸರ ಅಧ್ಯಯನ’ ಪುಸ್ತಕದ ಪರಿಷ್ಕರಣೆ ಆಗಿಲ್ಲ.
ರಾಜ್ಯ @BJP4Karnataka ಸರ್ಕಾರದ ಜನಪರ ಕಾರ್ಯಗಳನ್ನು ಸಹಿಸದ ಕಾಂಗ್ರೆಸ್ ಪಕ್ಷದ ಮುಖಂಡರು ದಿನಕ್ಕೊಂದು ಸುಳ್ಳು ಹೇಳಿ ಜನರ ದಾರಿ ತಪ್ಪಿಸಲು ಸಾಧ್ಯವಿಲ್ಲ.
ಸುಳ್ಳನ್ನು ಎಷ್ಟು ಸಲ ಹೇಳಿದರು ಸತ್ಯವಾಗದು ! pic.twitter.com/8oXgofvbda
— B.C Nagesh (@BCNagesh_bjp) May 24, 2022
ಈ ಬಗ್ಗೆ ಟ್ವೀಟರ್‌ನಲ್ಲಿ ಸ್ಪಷ್ಟೀಕರಣ ನೀಡಿರುವ ಅವರು, ರಾಜ್ಯ ಸರ್ಕಾರದ ಜನಪರ ಕಾರ್ಯಗಳನ್ನು ಸಹಿಸದ ಕಾಂಗ್ರೆಸ್ ಪಕ್ಷದ ಮುಖಂಡರು ದಿನಕ್ಕೊಂದು ಸುಳ್ಳು ಹೇಳಿ ಜನರ ದಾರಿ ತಪ್ಪಿಸಲು ಸಾಧ್ಯವಿಲ್ಲ. ಸುಳ್ಳನ್ನು ಎಷ್ಟು ಸಲ ಹೇಳಿದರು ಸತ್ಯವಾಗದು ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ರೋಹಿತ್ ಚಕ್ರತೀರ್ಥ Rohith Chakratheertha ಅಧ್ಯಕ್ಷತೆಯ ಸಮಿತಿಯವರು 4ನೆಯ ತರಗತಿ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯಪುಸ್ತಕ ಪರಿಷ್ಕರಿಸಿದ್ದು, ಕುವೆಂಪು ಅವರ ಬಗ್ಗೆ ಇದ್ದ ವಿಷಯಾಂಕವನ್ನು ಕೈಬಿಡಲಾಗಿದೆ ಹಾಗೂ ಕುವೆಂಪು ಅವರಿಗೆ ಅಪಮಾನಗೊಳಿಸಲಾಗಿದೆ ಎಂದು ಮಾಧ್ಯಮಗಳಲ್ಲಿ ಸುದ್ಧಿಗಳು ಪ್ರಸಾರವಾಗುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಈ ಸ್ಪಷ್ಟೀಕರಣ ನೀಡಿದ್ದಾರೆ.
Also read: ಮೇ 25ರಂದು ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post