ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನ್ಯಾಯಾಧೀಶ ಸದಾನಂದ ಎಂ ಕಲಾಲ್ ಅವರಿಗೆ ಅನಾರೋಗ್ಯದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುವ ಮಾರ್ಗಮಧ್ಯೆ ಹೃದಯಾಘಾತವಾಗಿದ್ದು, ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಅನಾರೋಗ್ಯದ ಕಾರಣ ಕಳೆದ ಕೆಲವು ದಿನಗಳಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಹೆಚ್ಚಿನ ಚಿಕಿತ್ಸೆ ಅವಶ್ಯಕತೆಯಿದ್ದ ಕಾರಣ ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯ ಹೃದಯಾಘಾತವಾದ ಹಿನ್ನೆಲೆ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
Also read: ಉದ್ಯಮ ಕೇಂದ್ರಿತ ಶಿಕ್ಷಣಕ್ಕೆ ಒತ್ತು: ಪ್ರೊ. ವೀರಭದ್ರಪ್ಪ

ಪ್ರಸ್ತುತ ಶಿವಮೊಗ್ಗದ ಕನ್ಸೂಮರ್ ಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರು ಧಾರವಾಡದಲ್ಲಿ ನ್ಯಾಯಾಧೀಶರಾಗಿ ನಿವೃತ್ತಿ ಹೊಂದಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















