ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ D K Shivakumar ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಮತ್ತೊಂದು ಹೊಸ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.
2008ರಲ್ಲಿ ದೆಹಲಿಯ ಅಪಾರ್ಟ್‌ಮೆಂಟ್’ನಲ್ಲಿ ದೊರೆದ ದಾಖಲೆಯಿಲ್ಲದ 8 ಕೋಟಿ ರೂ. ಹಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ, 2019ರಲ್ಲಿ ಡಿಕೆಶಿ ಅವರನ್ನು ಬಂಧಿಸಲಾಗಿತ್ತು. ಆನಂತರ ಅನಾರೋಗ್ಯದ ನೆಪವೊಡ್ಡಿ ಡಿಕೆಶಿ ಜಾಮೀನು ಪಡೆದಿದ್ದರು.
ಆದರೆ, ಈಗ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಹೊಸ ಚಾರ್ಜ್‌ಶೀಟನ್ನು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಈ ಮೂಲಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಿಗೆ ಹೊಸ ಸಂಕಷ್ಟ ಎದುರಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















