ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಲ್ಲಿನ ಬನಶಂಕರಿ ಬಳಿಯಲ್ಲಿ ಪೆಟ್ರೋಲ್ ಬಂಕ್ ಬಳಿಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 16 ವರ್ಷದ ಬಾಲಕಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ದೇವೆಗೌಡ ಪೆಟ್ರೋಲ್ ಬಂಕ್ ಬಳಿಯಲ್ಲಿ ಶಾಲಾ ಬಸ್’ವೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಆಯತಪ್ಪಿ ಕೆಳಕ್ಕೆ ಬಿದ್ದ ಕೀರ್ತನಾ (16) ವರ್ಷದ ಬಾಲಕಿಯ ಮೇಲೆ ಬಸ್ ಹರಿದಿದೆ. ಇದರಿಂದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
Also read: ಕೆಪಿಸಿಸಿ ಅಧ್ಯಕ್ಷರಿಗೆ ಮತ್ತೊಂದು ಸಂಕಷ್ಟ: ಡಿಕೆಶಿ ವಿರುದ್ಧ ಇಡಿಯಿಂದ ಮತ್ತೊಂದು ಚಾರ್ಜ್‌ಶೀಟ್

ಮೃತ ಬಾಲಕಿ ತನ್ನ ತಂದೆಯೊಂದಿಗೆ ಬೈಕ್’ನಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















