ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಾಟರ್ ಟ್ಯಾಂಕರ್ ಒಂದು ರಿವರ್ಸ್ ತೆಗೆದುಕೊಳ್ಳುವ ವೇಳೆ ಸಂಭವಿಸಿದ ಅವಘಡದಲ್ಲಿ ಬಾಲಕನೊಬ್ಬ ಮೃತಪಟ್ಟ ಧಾರುಣ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಸರ್ಜಾಪುರದ ಅಪಾರ್ಟ್‌ಮೆಂಟ್‌ವೊಂದಕ್ಕೆ ನೀರು ಪೂರೈಕೆಗಾಗಿ ಬಂದಿದ್ದ ವಾಟರ್ ಟ್ಯಾಂಕರ್ ರಿವರ್ಸ್ ತೆಗೆದುಕೊಳ್ಳುವ ವೇಳೆ ಬಾಲಕನ ಮೇಲೆ ಹರಿದಿದೆ. ಪರಿಣಾಮವಾಗಿ ಪ್ರತಿಷ್ಟ್ (5) ಎಂಬ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಾಲಕನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎಂದು ಹೇಳಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















