No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೋವಿಡ್ ಸಂಕಷ್ಟದಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಸರ್ವಥಾ ಮನನೀಯ: ಸಂಸದ ರಾಘವೇಂದ್ರ ಶ್ಲಾಘನೆ

ಡಾ. ಸರ್ಜಿ ಅವರನ್ನು ಹಾಡಿ ಹೊಗಳಿದ ಸಂಸದರು | ಆಶಾ ಕಾರ್ಯಕರ್ತೆಯರಿಗೆ ಸರ್ಜಿ ಆಸ್ಪತ್ರೆಯಿಂದ ಆರೋಗ್ಯ ಕಾರ್ಡ್ ವಿತರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 26, 2022
in ಶಿವಮೊಗ್ಗ
0
ಕೋವಿಡ್ ಸಂಕಷ್ಟದಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಸರ್ವಥಾ ಮನನೀಯ: ಸಂಸದ ರಾಘವೇಂದ್ರ ಶ್ಲಾಘನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕೋವಿಡ್ ಸಂಕಷ್ಟ ಕಾಲದಲ್ಲಿ ತಮ್ಮ ಜೀವದ ಹಂಗನ್ನೇ ತೊರೆದು ಕರ್ತವ್ಯ ನಿರ್ವಹಿಸಿದ ಆಶಾ ಕಾರ್ಯಕರ್ತೆಯರ ಸೇವೆ ಸರ್ವಥಾ ಮನನೀಯ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಶ್ಲಾಘಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ, ಚೈತನ್ಯ ರೂರಲ್ ಡೆವಲಪಮೆಂಟ್ ಸೊಸೈಟಿ, ಶಿವಮೊಗ್ಗ ಹಾಗೂ ಸರ್ಜಿ ಫೌಂಡೇಷನ್, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಇಂದು ನಡೆದ ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸರ್ಜಿ ಆಸ್ಪತ್ರೆಯ ಆರೋಗ್ಯ ಕಾರ್ಡ್’ಗಳನ್ನು ವಿತರಿಸಿ ಅವರು ಮಾತನಾಡಿದರು.

ಆಶಾ ಕಾರ್ಯಕರ್ತೆಯರಿಗೆ ಅಭಿಮಾನದ ಅಭಿನಂದನೆಯ ಜೊತೆಗೆ ಅವರ ಆರೋಗ್ಯದ ದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಆರೋಗ್ಯ ಕಾರ್ಯಕರ್ತೆಯರಿಗೆ ಮಹಾಮಾರಿ ಕೋವಿಡ್ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಧೈರ್ಯವನ್ನು ತುಂಬಿದ್ದಾರೆ. ಅವರ ಆರೋಗ್ಯವನ್ನು ಕಾಪಾಡಲು ಹಗಲಿರುಳೆನ್ನದೇ ತಮ್ಮ ಜೀವದ ಹಂಗನ್ನೇ ತೊರೆದು ಕರ್ತವ್ಯವನ್ನು ನಿರ್ವಹಿಸಿದ ಶಿವಮೊಗ್ಗ ಜಿಲ್ಲಾ ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.

ಯಾವುದೇ ಸನ್ಮಾನ ಬಿರುದುಗಳಿಗೆ ಆಸೆ ಪಡೆದೇ ನಿಸ್ವಾರ್ಥ ಸೇವೆಯಿಂದ ಮನೆಯ ಕುಟುಂಬದವರ ಕಟುಮಾತುಗಳನ್ನು ಲೆಕ್ಕಿಸದೇ ಸಿಕ್ಕಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸಿ ಮಹಾಮಾರಿ ಕೊರೋನಾವನ್ನು ಹೊಡೆದೊಡಿಸಲು ಶ್ರಮಿಸಿದ ಅಶಾವಾದದ ಆಶಾ ಕಾರ್ಯಕರ್ತೆಯರಿಗೆ ಈ ಆಭಿನಂದನೆ ಅರ್ಥಪೂರ್ಣವಾದುದು. ತಮ್ಮ ನಿಸ್ವಾರ್ಥ ಸೇವೆಯ ಬಗ್ಗೆ ಸಂಸತ್ ಸಭೆಯಲ್ಲಿ ಚರ್ಚಿಸಿ ತಮಗೆ ಅನುಕೂಲವಾಗುವ ರೀತಿಯಲ್ಲಿ ಚರ್ಚಿಸಿ, ತಮಗೆ ನ್ಯಾಯ ಒದಗಿಸಿಕೊಡುತ್ತೇನೆ ಎಂದು ಭರವಸೆ ನೀಡಿದರು.

Also read: ಬಾವೈಕ್ಯತಾ ಜಾಥಾಗಳು ಸಮಾಜದಲ್ಲಿನ ಭೇದ-ಭಾವ ತೊಲಗಿಸಲು ಸಹಕಾರಿ: ಡಾ. ವಿಕ್ರಂ ಅಮಟೆ

ಮೆಗ್ಗಾನ್ ಆಸ್ಪತ್ರೆಯಲ್ಲಿ ವಿದ್ಯುತ್ ಅವಘಡದಿಂದಾಗಿ ದೊಡ್ಡ ಪ್ರಮಾಣ ಸೃಷ್ಠಿಯಾಗಿತ್ತು. ಆ ತುರ್ತು ಸಂದರ್ಭದಲ್ಲಿ ಡಾ.ಧನಂಜಯ ಸರ್ಜಿ ಅವರ ವಿಶೇಷ ಹಾಗೂ ಶೀಘ್ರ ಪ್ರಯತ್ನದ ಫಲವಾಗಿ ಶಿವಮೊಗ್ಗದಲ್ಲಿ ದೊಡ್ಡ ಅನಾಹುತ ತಪ್ಪಿತು. ಅಂದು ಸರ್ಜಿ ಆಸ್ಪತ್ರೆಯ ಸಹಕಾರವನ್ನು ನಗರ ಎಂದಿಗೂ ಮರೆಯುವಂತಿಲ್ಲ.
-ಬಿ.ವೈ. ರಾಘವೇಂದ್ರ, ಸಂಸದ

ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಕಿಟ್ ವಿತರಿಸಿ ಮಾತನಾಡಿದ ಎಂಎಲ್’ಸಿ ಎಸ್. ರುದ್ರೇಗೌಡ, ಆಶಾ ಕಾರ್ಯಕರ್ತೆಯರು ಮತ್ತು ಅವರ ಕುಟುಂಬದವರ ಆರೋಗ್ಯಕ್ಕಾಗಿ ಅವಶ್ಯವಿರುವ ಪ್ರಾಥಮಿಕ ಆರೋಗ್ಯ ಪರೀಕ್ಷಾ ಸಾಮಾಗ್ರಿಗಳು ಹಾಗೂ ಆರೋಗ್ಯ ರಕ್ಷಣಾ ಸಾಮಾಗಿಗಳನ್ನು ಒಳಗೊಂಡ ಒಂದು ಉತ್ತಮವಾದ ಕಿಟ್ಟನ್ನು ಕೊಡುತ್ತಿರುವ ಚೈತನ್ಯ ಫೌಂಡೇಷನ್’ನವರ ಕಾರ್ಯವನ್ನು ಮುಕ್ತಕಂಠದಿಂದ ಕೊಂಡಾಡಿದರು. ಬಹಳ ಉಪಯುಕ್ತವಾದದ್ದು ಹಾಗೂ ಇದೊಂದು ಸಾಮಾಜಿಕ ಕಳಕಳಿಯ ಉತ್ತಮ ವಿಚಾರ. ಸರ್ಜಿ ಫೌಂಡೇಷನ್ ಮುಂದಾಲೋಚನೆಯ ವಿಚಾರ ಅಭಿನಂದನೀಯ ಎಂದರು.

ಎಂಎಲ್’ಸಿ ಆಯನೂರು ಮಂಜುನಾಥ್ ಮಾತನಾಡಿ, ಇಂತಹ ಒಂದು ಅಭಿನಂದನಾ ಕಾರ್ಯಕ್ರಮ ತುಂಬಾ ಅರ್ಥಪೂರ್ಣವಾದುದು. ಎಲ್ಲಾ ವೈಯಕ್ತಿಕ ಸಮಸ್ಯೆಗಳನ್ನು ಬದಿಗಿಟ್ಟು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಎಲೆ ಮರೆಯ ಕಾಯಿಯಂತೆ ಸದಾ ಶ್ರಮಿಸುತ್ತಿರುವ ನಮ್ಮ ಎಲ್ಲಾ ಆಶಾ ಕಾರ್ಯಕರ್ತ ಸಹೋದರಿಯರಿಗೆ ಅಭಿನಂದಿಸುತ್ತಿರುವುದು ನನಗೆ ತುಂಬಾ ಸಂತೋಷ ಹಾಗೂ ಹೆಮ್ಮೆಯ ಸಂಗತಿ ಎಂದರು.

ಮುಂದಿನ ದಿನಗಳಲ್ಲಿ ಆಶಾ ಕಾರ್ಯಕರ್ತೆಯರ ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರಿಗೂ, ಪೌರಕಾರ್ಮಿಕರಿಗೂ ಸಹ ಇಂತಹ ಅಭಿನಂದನಾ ಸಮಾರಂಭಗಳು ಹಾಗೂ ಸಹಾಯದ ಅವಶ್ಯಕತೆಯಿದೆ ಎಂದರು.

ಅಪಾರ ಸಂಖ್ಯೆಯಲ್ಲಿ ಜಿಲ್ಲೆಯ ಆಶಾ ಕಾರ್ಯಕರ್ತೆಯರು, ಚೈತನ್ಯ ರೂರಲ್ ಡೆವಲೆಪ್ಮೆಂಟ್ ಸೊಸೈಟಿ ನಿರ್ದೇಶಕರು  ಡಾ.ಎಲ್.ಕೆ. ಶ್ರೀಪತಿ, ಬೆಂಗಳೂರು ಧ್ವನಿ ಫೌಂಡೇಷನ್ ನ ಸೈಯದ್ ಸಿದ್ದಿಕಿ, ಸರ್ಜಿ ಫೌಂಡೇಷನ್ ವೈದ್ಯಕೀಯ ನಿರ್ದೇಶಕರು ಡಾ. ಧನಂಜಯ ಸರ್ಜಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘ, ದಕ್ಷಿಣ ಪ್ರಾಂತದ ಕಾರ್ಯನಿರ್ವಾಹಕರು, ಪಟ್ಟಾಭಿರಾಮ್,  ಶಿವಮೊಗ್ಗ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ,  ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ಚೈತನ್ಯ ರೂರಲ್ ಡೆವಲೆಪ್ಮೆಂಟ್ ಸೊಸೈಟಿ ಹಾಗೂ ಸರ್ಜಿ ಫೌಂಡೇಷನ್ ಎಲ್ಲಾ ವೈದ್ಯರುಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದರು.

ಡಾ. ಧನಂಜಯ ಸರ್ಜಿಯವರು ಅತಿಥಿಗಳನ್ನು ಸ್ವಾಗತಿಸಿ, ಚೈತನ್ಯ ಸಂಸ್ಥೆಯ ಸಿಇಓ ಬಿ.ಟಿ. ಭದ್ರೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸರ್ಜಿ ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ಪುರುಷೋತ್ತಮ್ ಕೆ.ಆರ್.  ನಿರೂಪಿಸಿ, ಮೇಘನಾ ವಂದನಾರ್ಪಣೆ ನೆರವೇರಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMP RaghavendraNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share200Tweet123Send
Previous Post

ಬಾವೈಕ್ಯತಾ ಜಾಥಾಗಳು ಸಮಾಜದಲ್ಲಿನ ಭೇದ-ಭಾವ ತೊಲಗಿಸಲು ಸಹಕಾರಿ: ಡಾ. ವಿಕ್ರಂ ಅಮಟೆ

Next Post

ಚಳ್ಳಕೆರೆ ಶಾಸಕ ರಘುಮೂರ್ತಿ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊರೋನಾ: ಸಾರ್ವಜನಿಕರು ಹೆಚ್ಚು ಜಾಗೃತರಾಗಿರಿ: ಶಾಸಕ ರಘುಮೂರ್ತಿ ಮನವಿ

ಚಳ್ಳಕೆರೆ ಶಾಸಕ ರಘುಮೂರ್ತಿ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಹೊಸನಗರ, ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ!

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

May 25, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 26ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

May 25, 2026
ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

May 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL