ಕಲ್ಪ ಮೀಡಿಯಾ ಹೌಸ್ | ಬೀದರ್ |
ಉತ್ತರ ಪ್ರದೇಶದ ಮೋತಿಪುರದ ಬಳಿ ಭಾನುವಾರ ಮುಂಜಾನೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದ ಬೀದರ್ ಜಿಲ್ಲೆಯ ಸುಲ್ತಾನಪುರದ ಆರು ಜನರ ಅಂತ್ಯಕ್ರಿಯೆ ಸೋಮವಾರ ಸಂಜೆ ಸುಲ್ತಾನಪುರದಲ್ಲಿ ನಡೆಯಿತು. ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ರವರು ಆರು ಜನರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.
ಬಳಿಕ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಲ್ಲಿ ಸುಲ್ತಾನಪುರದವರು ಆರು ಜನರು ಎಂಬುದು ದುಃಖದ ವಿಷಯವಾಗಿದೆ. ಒಂದು ಕುಟುಂಬದ ನಾಲ್ವರು ಮತ್ತು ಇನ್ನೊಂದು ಕುಟುಂಬದ ಇಬ್ಬರು ಮೃತಪಟ್ಟಿದ್ದಾರೆ. ಅಷ್ಟೂರ ಗ್ರಾಮದ ಇನ್ನೊಬ್ಬರು ಇದೇ ದುರಂತದಲ್ಲಿ ಕೊನೆಯುಸಿರೆಳೆದಿದ್ದಾರೆ. ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದಿಂದ ದೊರೆಯಬೇಕಾದ ನೆರವು ಒದಗಿಸಿಕೊಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ ಎಂದರು.
ಉತ್ತರ ಪ್ರದೇಶದಲ್ಲಿ ನಡೆದ ಘೋರ ದುರಂತದಿಂದ ತುಂಬಾ ದುಃಖವಾಗಿದೆ. ಅಪಘಾತದಲ್ಲಿ ಮೃತಪಟ್ಟವರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಲಿ, ಅವರ ಕುಟುಂಬ ವರ್ಗಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಗಾಯಾಳುಗಳು ಬೇಗನೆ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ತಿಳಿಸಿದರು. ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಮೇಶ್ ಪಾಟೀಲ್ ಸೋಲಪೂರ್ ರವರು ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post