ಕಲ್ಪ ಮೀಡಿಯಾ ಹೌಸ್ | ಗಾಂಧಿನಗರ |
ಗುಜರಾತ್ ನ ಯುವ ರಾಜಕೀಯ ಮುಖಂಡ ಹಾರ್ದಿಕ್ ಪಟೇಲ್ Hadhik Patel ಇಂದು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ತೊರೆದಿದ್ದ ಅವರು, ದೇಶಸೇವೆ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಡಿಯಲ್ಲಿ ಸಣ್ಣ ಸೈನಿಕನಂತೆ ಉತ್ತಮ ಕೆಲಸ ಮಾಡಿಕೊಂಡು ಹೋಗುತ್ತೇನೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಷ್ಟ್ರ, ರಾಜ್ಯ, ಸಾರ್ವಜನಿಕ ಮತ್ತು ಸಾಮಾಜಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಇಂದಿನಿಂದ ನಾನು ಹೊಸ ಅಧ್ಯಾಯ ಆರಂಭಿಸಲಿದ್ದೇನೆ. ಪ್ರಧಾನಿ ಮೋದಿಯವರ ನಾಯಕತ್ವದಡಿಯಲ್ಲಿ ನಿಷ್ಠೆಯಿಂದ ಸಣ್ಣ ಸೈನಿಕನಂತೆ ದೇಶ ಸೇವೆ ಮಾಡುತ್ತೇನೆ ಎಂದು ಹೇಳಿದ್ದಾರೆ.
Also read: ಕಾಂಗ್ರೆಸ್ ಅವಧಿಯ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಬಗ್ಗೆ ಸಾಹಿತಿ ಎಸ್.ಎಲ್. ಭೈರಪ್ಪ ಸ್ಫೋಟಕ ಹೇಳಿಕೆ
ಬಿಜೆಪಿ ಸೇರ್ಪಡೆಗೆ ಮುನ್ನ ಇಂದು ಬೆಳಗ್ಗೆ ಅಹಮದಾಬಾದ್ ನ ತಮ್ಮ ನಿವಾಸದಲ್ಲಿ ಹಾರ್ದಿಕ್ ಪಟೇಲ್ ಪೂಜೆ ಸಲ್ಲಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post