ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಖಿಲ ಭಾರತ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ Simple star Rakshith Shetty ಅಭಿಮಾನಿ ಬಳಗ ಜಿಲ್ಲಾ ಶಾಖೆ ವತಿಯಿಂದ ಇಂದು ಶಾರದಾ ದೇವಿ ಅಂಧರ ವಿಕಾಸ ಕೇಂದ್ರ ಮಕ್ಕಳೊಂದಿಗೆ ವಿಶೇಷವಾಗಿ ಹುಟ್ಟುಹಬ್ಬ ಆಚರಣೆ ಮಾಡಲಾಯಿತು.
ಈ ಶಾಲೆಯಲ್ಲಿ ಒಟ್ಟು 80 ಮಕ್ಕಳಿದ್ದು, ಅದರಲ್ಲಿ 15 ಮಕ್ಕಳು ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಹುಟ್ಟುಹಬ್ಬ ಸಂದರ್ಭದಲ್ಲಿ ಮುಖ್ಯಸ್ಥರಾದ ಮಂಜುನಾಥ್ ಶೆಟ್ಟಿ, ರಾಘವೇಂದ್ರ, ನಾಗರಾಜ್, ಮಂಜುನಾಥ್, ಸುಧೀರ್, ಸಂದೀಪ್, ಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.
Also read: ಬೆದರಿಕೆ ಸಂದೇಶ ಹಿನ್ನೆಲೆ ಆರ್ ಎಸ್ ಎಸ್ ಕಚೇರಿಗಳಿಗೆ ಹೆಚ್ಚಿನ ಭದ್ರತೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಜೂನ್ 10 ರಂದು ವಿಶ್ವಾದ್ಯಂತ ತೆರೆ ಕಾಣುತ್ತಿರುವ 777 CHARLIE ಚಿತ್ರವು ಅತ್ಯಂತ ಯಶಸ್ವಿಯಾಗಿ ಪ್ರದರ್ಶನವಾಗಲೀ ಎಂದು ಅಭಿಮಾನಿ ಬಳಗ ಶುಭ ಹಾರೈಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post