ಕಲ್ಪ ಮೀಡಿಯಾ ಹೌಸ್ | ಕಾರವಾರ |
ಬ್ಯಾಗ್‌ನೊಂದಿಗೆ ಅನುಮಾನಾಸ್ಪದ ವಸ್ತುಗಳನ್ನು ಹೊಂದಿದ್ದ ವ್ಯಕ್ತಿಯೋರ್ವನನ್ನು ರೈಲ್ವೆ ಆರ್‌ಪಿಎಫ್ ಸಿಬ್ಬಂದಿ ತಪಾಸಣೆಗೊಳಪಡಿಸಿದಾಗ 2 ಕೋಟಿ ರೂ. ಹಣ ಪತ್ತೆಯಾಗಿದ್ದು, ಓರ್ವನನ್ನು ವಶಕ್ಕೆ ಪಡೆದಿರುವ ಘಟನೆ ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರೈಲು ಸಂಖ್ಯೆ 12133 ಮುಂಬೈ ಛತ್ರಪತಿ ಶಿವಾಜಿ ಟರ್ಮಿನಲ್- ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್‌ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಅಪರಿಚಿತ ಯುವಕನ್ನು ತಪಾಸಣೆಗೊಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಈತ ರಾಜಸ್ಥಾನದ ಜಲೋರ್‌ನ ನಿವಾಸಿ ಚೇನ್ ಸಿಂಗ್ (22) ಎಂದು ಗುರುತಿಸಲಾಗಿದೆ. ತಪಾಸಣೆ ವೇಳೆ ಬ್ಯಾಗ್ ತೆರೆಯಲು ಹೇಳಿದರೆ ಮೊದಲು ನಿರಾಕರಿಸಿದ್ದಾನೆ. ನಂತರ ಬ್ಯಾಗಿನಲ್ಲಿ ದುಡ್ಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಕೂಲಂಕುಷ ವಿಚಾರಣೆ ನಡೆಸಿದಾಗ ಮುಂಬೈನ ಭರತ್ ಭಾಯ್ ಅಲಿಯಾಸ್ ಪಿಂಟು ಎಂಬಾತನ ಬಳಿ ರೂ.15,000 ಮಾಸಿಕ ವೇತನದಲ್ಲಿ ಕೆಲಸ ಮಾಡುತ್ತಿದ್ದು, ಹಣವನ್ನು ಮಂಗಳೂರಿನಲ್ಲಿರುವ ರಾಜು ಎನ್ನುವವರಿಗೆ ತಲುಪಿಸಲು ಒಯ್ಯುತ್ತಿರುವುದ್ದೇನೆ ಎಂದು ತಿಳಿಸಿದ್ದಾನೆ.
Also read: ರೋಗ ಪರಿಹಾರಕ್ಕೆ ಧನ್ವಂತರಿ ಮೊರೆ ಹೋಗೋಣ: ಪಂಡಿತ ಹರೀಶ ಆಚಾರ್ಯ ಕರೆ
ವ್ಯಕ್ತಿಯನ್ನು ಜಪ್ತಿಪಡಿಸಿಕೊಂಡ 2 ಸಾವಿರ ಮುಖಬೆಲೆಯ ನೋಟುಗಳನ್ನು ಹೊಂದಿರುವ 2 ಕೋಟಿ ರೂ. ನಗದನ್ನು ಬ್ಯಾಗ್ ಸಹಿತ ವಶಪಡಿಸಿಕೊಂಡಿದ್ದು, ಅಗತ್ಯ ಕ್ರಮಕ್ಕಾಗಿ ಆದಾಯ ತೆರಿಗೆ ಇಲಾಖೆಯ ನಿರ್ದೇಶನದಂತೆ ಕಾರವಾರ ಗ್ರಾಮೀಣ ಠಾಣೆಗೆ ಹಸ್ತಾಂತರಿಸಲಾಗಿದೆ. ತನಿಖೆ ಮುಂದುವರಿದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post