ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕ್ಯಾಂಟರ್, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಪರದಾಡಿದ ಘಟನೆ ನಗರದ ಮೈಸೂರು ರಸ್ತೆಯಲ್ಲಿರುವ ಸ್ಯಾಟ್ ಲೈಟ್ ಬಸ್ ನಿಲ್ದಾಣದ ಬಳಿ ಸೋಮವಾರ ನಡೆದಿದೆ.
ಅಪಘಾತದಲ್ಲಿ ಆಟೋ ಸಂಪೂರ್ಣ ಜಖಂ ಗೊಂಡಿದ್ದು, ಆಟೋದಲ್ಲಿ ಸಿಲುಕಿದ್ದ ಚಾಲಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಘಟನೆಯಲ್ಲಿ ಆಟೋ ಚಾಲಕನ ಕಾಲುಗಳು ಕಟ್ ಆಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎನ್ನಲಾಗಿದೆ.
ಸರಣಿ ಅಪಘಾತದಿಂದಾಗಿ ಮೈಸೂರು ರಸ್ತೆಯಲ್ಲಿ ಅರ್ಧ ಗಂಟೆಗೂ ಹೆಚ್ಚು ಸಮಯ ಟ್ರಾಫಿಕ್ ಜಾಮ್ ಆದ ಪರಿಣಾಮ ವಾಹನ ಸವಾರರು ಪರದಾಡುವಂತಾಯಿತು.
Also read: ಹರಿಹರ: ಸ್ಯಾಂಡಲ್‍ವುಡ್ ನಟ ಮಾಸ್ಟರ್ ಆನಂದ್ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post