ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಜೂ. 20, 21ರ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದು, ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಗಳಲ್ಲಿ ಭಾಗಿಯಾಗಲಿದ್ದಾರೆ.
ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮ ಗಳಲ್ಲಿ ಭಾಗವಹಿಸುವೆ. ಮೊದಲ ಕಾರ್ಯಕ್ರಮ @iiscbangalore, ಅಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಲಾಗುವುದು. ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿಲಾನ್ಯಾಸ ನೆರವೇರಿಸಲಾಗುವುದು.
— Narendra Modi (@narendramodi) June 20, 2022
ಈ ಕುರಿತು ಪ್ರಧಾನಿ ಮೋದಿಯವರು ಟ್ವೀಟ್ ಮಾಡಿದ್ದು, ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮಗಳಲ್ಲಿ ಭಾಗವಹಿಸುವೆ ಎಂದು ಕನ್ನಡದಲ್ಲಿ ಪೋಸ್ಟ್ ಮಾಡಿರುವುದು ವಿಶೇಷವಾಗಿದೆ.
ಮೊದಲು ಐಐಎಸ್‌ಸಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿ, ನಂತರ ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post