ಕಲ್ಪ ಮೀಡಿಯಾ ಹೌಸ್ | ತುಮಕೂರು |
ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಶಿವಸಂದ್ರ ಗೇಟ್ ಬಳಿ ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರು ಅಪಘಾತದಲ್ಲಿ ಕಾರುನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ.
ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಚಿಕ್ಕನಾಯಕನಹಳ್ಳಿಯ ಗಿರೀಶ್ (32) ಹಾಗೂ ಮಾನ್ಯ (17) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















