ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾರ್ವಜನಿಕರ ರಕ್ಷಣೆ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆದಿರುವುದು ನಾಚಿಗೇಡಿನ ಸಂಗತಿಯಾಗಿದ್ದು, ಈ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಗೂ ಗೂಂಡಾವರ್ತನೆ ತೋರುತ್ತಿರುವವರ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಜುರುಗಿಸಬೇಕೆಂದು ಶಾಸಕ ಈಶ್ವರಪ್ಪ MLA Eshwarappa ಹೇಳಿದರು.
ನಗರದಲ್ಲಿ ಮಂಗಳವಾರ ಚಾಕು ಇರಿತಕ್ಕೊಳಗಾಗಿ ಎನ್ ಹೆಚ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೊಲೀಸ್ ಪೇದೆಯವರ ಆರೋಗ್ಯ ವಿಚಾರಿಸಲು ಶಾಸಕ ಈಶ್ವರಪ್ಪ ನಾರಾಯಣ ಹೃದಯಾಲಯಕ್ಕೆ ಭೇಟಿ ನೀಡಿ, ಅವರು ಮಾತನಾಡಿದದರು.
ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಹಿಡಿಯಲೆತ್ನಿಸಿದ ಸಂದರ್ಭದಲ್ಲಿ ಇನ್ನೋರ್ವ ಮಾರಕಾಸ್ತ್ರದಿಂದ ಪೊಲೀಸ್ ಪೇದೆ ಎದೆಗೆ ಚುಚ್ಚಿದ್ದು, ಅದೃಷ್ಟವಶಾತ್ ಆರಕ್ಷಕ ಸಿಬ್ಬಂದಿಗೆ ಗಂಭೀರ ಗಾಯಗಳಾಗಿಲ್ಲ. ತದನಂತರದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸ್ ಯಶಸ್ವಿಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ತಮ್ಮ ಸ್ವಕ್ಷೇತ್ರಶಿವಮೊಗ್ಗದಲ್ಲಿ ಇತ್ತೀಚಿನ ದಿನಗಳಲ್ಲಿ ಮುಸಲ್ಮಾನ ಗೂಂಡಾಗಳ ಹಾವಳಿ ಹೆಚ್ಚಾಗಿದ್ದು, ಈ ಬಗ್ಗೆ ಸೂಕ್ತ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಈಗಾಗಲೇ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಒತ್ತಾಯಿಸಿದ್ದೇನೆ. ಹಾಗೂ ಈ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೂ ತರುತ್ತೇನೆ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post