ಕಲ್ಪ ಮೀಡಿಯಾ ಹೌಸ್ | |
ಇಲ್ಲಿನ ವಿಐಎಸ್‌ಎಲ್ ಕ್ವಾಟ್ರಸ್‌ನಲ್ಲಿ ಇಂದು ಮುಂಜಾನೆ ಕಾಣಿಸಿಕೊಂಡಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಇಂದು ಮುಂಜಾನೆ ವಿಐಎಸ್‌ಎಲ್ ಆಸ್ಪತ್ರೆ ಬಳಿಯ ಕ್ವಾಟ್ರಸ್‌ನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಸ್ಥಳೀಯರ ಮಾಹಿತಿ ಆಧರಿಸಿ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದರು. ಸತತ ೪ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಚಚ್ಚುಮದ್ದು ಪ್ರಯೋಗಿಸಿ ಚಿರತೆಗೆ ಬಲೆ ಹಾಕಿ ಸೆರೆ ಹಿಡಿಯಲಾಗಿದೆ. ಸೆರೆ ಸಿಕ್ಕ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನಿನಲ್ಲಿ ಬಂಧಿಸಿದ್ದಾರೆ.
ಇದರಿಂದಾಗಿ ಸ್ಥಳೀಯರಲ್ಲಿ ಮುಂಜಾನೆಯಿಂದ ಮೂಡಿದ್ದ ಆತಂಕ ದೂರವಾಗಿದ್ದು, ನಿಟ್ಟುಸಿರು ಬಿಡುವಂತಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















