ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿರುವ ವೇದಿಕಾ Actress Vedika ಅವರಿಗೆ ಕೊರೋನಾ Corona ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಇದೇ ಮೊದಲ ಬಾರಿಗೆ ನನಗೆ ಕೋವಿಡ್ ಪಾಸಿಟಿವ್ Covid Positive ಆಗಿದ್ದು, ತಾವೀಗ ತೀವ್ರ ರೀತಿಯ ಜ್ವರದಿಂದ ನರಳುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ.
ಶಿವರಾಜ್ ಕುಮಾರ್ ನಟನೆಯ ಶಿವಲಿಂಗು ಸೇರಿದಂತೆ ಕನ್ನಡದ ಅನೇಕ ಚಿತ್ರಗಳಲ್ಲಿ ನಟಿಸಿರುವ ವೇದಿಕಾ ಕೊರೋನಾ ಲಕ್ಷಣಗಳನ್ನು ಬರೆದುಕೊಂಡಿದ್ದಾರೆ. ಹಾಗಾಗಿ ಅಗತ್ಯ ಚಿಕಿತ್ಸೆಯನ್ನೂ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.
ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಅಭಿಮಾನಿಗಳಿಗೆ ಕರೆ ನೀಡಿರುವ ಅವರು, ಕನ್ನಡದ ಸಂಗಮಾ, ಹೋಮ್ ಮಿನಿಸ್ಟರ್, ಗೌಡರ ಹೋಟೆಲ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post