ಕಲ್ಪ ಮೀಡಿಯಾ ಹೌಸ್ | ಹಾಸನ |
ಇ.ಡಿ. ವಿಚಾರಣೆ ಹೆಸರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ Rahul Gandhi ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ H D Kumaraswamy ಹೇಳಿದರು.
ಹಾಸನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; “ರಾಹುಲ್ ಗಾಂಧಿ ಅವರ ಬಗ್ಗೆ ಮಾಹಿತಿ ತೆಗೆದುಕೊಳ್ಳಲು ನಿರಂತರವಾಗಿ ವಿಚಾರಣೆಗೆ ಕರೆಯುತ್ತಿದ್ದಾರೆ. ವಿಚಾರಣೆ ಮಾಡಲು ಐದು ದಿನಗಳು ಬೇಕಾ? ಎಲ್ಲಾ ದಾಖಲಾತಿಗಳೂ ಇಡಿ ಬಳಿಯೇ ಇರುತ್ತವೆ. ಅರ್ಧ ಗಂಟೆಯಲ್ಲೇ ಎಲ್ಲಾ ವಿಚಾರಣೆ ಮಾಡಿ ಮುಗಿಸಬಹುದು” ಎಂದು ಅಭಿಪ್ರಾಯಪಟ್ಟರು.
ಸುಮ್ಮನೆ ರಾಹುಲ್ ಗಾಂಧಿ ಅವರಿಗೆ ಕಿರಿಕುಳ ನೀಡುವ ದುರುದ್ದೇಶದಿಂದ ಈ ರೀತಿ ವಿಚಾರಣೆ ಮಾಡುತ್ತಿದ್ದಾರೆ. ಸುಬ್ರಹ್ಮಣ್ಯಸ್ವಾಮಿ ದೂರು ನೀಡಿದರು ಎಂದು ತನಿಖೆ ಆರಂಭಿಸಿದ್ದಾರೆ. ಕರ್ನಾಟಕದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಸ್ವತಃ ಪ್ರಧಾನಿಗಳಿಗೇ ಪತ್ರ ಬರೆದು 40% ಕಮಿಷನ್ ಬಗ್ಗೆ ದೂರಿದ್ದರು. ಈ ಬಗ್ಗೆ ಯಾಕೆ ಇಲ್ಲಿಯವರೆಗೆ ತನಿಖೆ ನಡೆಸಲಿಲ್ಲ ಎಂದು ಅವರು ಪ್ರಶ್ನೆ ಮಾಡಿದರು.
Also read: ಅಗ್ನಿಪಥ್ ಯೋಜನೆ ಬಗ್ಗೆ ನಿಮಗೆ ಗೊತ್ತಾ? ಇಲ್ಲಿದೆ ಮಾಹಿತಿ
ಕೇವಲ ರಾಜಕೀಯ ಕಾರಣಗಳನ್ನು ಮುಂದಿಟ್ಟುಕೊಂಡು ರಾಹುಲ್ ಗಾಂಧಿ ಅವರ ವಿಚಾರಣೆ ನಡೆಸಲಾಗುತ್ತಿದೆ ಎನ್ನುವುದು ಯಾರಿಗಾದರೂ ಅರ್ಥವಾಗುತ್ತದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post