ಕಲ್ಪ ಮೀಡಿಯಾ ಹೌಸ್ | ಸಾಗರ |
ಮಕ್ಕಳಿಗೆ ನೀಡಬೇಕಾದ ಆಹಾರ ಕಳಪೆಯಾಗಿದೆ, ಅಕ್ಕಿಯನ್ನು ಸರಿಯಾಗಿ ಸ್ವಚ್ಛಗೊಳಿಸದೆ ಅಡುಗೆ ಮಾಡಿ ಬಡಿಸುತ್ತಿರುವುದು ಗಮನಕ್ಕೆ ಬಂದಿದೆ ಈ ರೀತಿ ಘಟನೆ ಮತ್ತೆ ಮರುಕಳಿಸಿದರೆ ಸಂಬಂಧ ಪಟ್ಟವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುವ ಬಗ್ಗೆ ಶಾಸಕ ಹಾಲಪ್ಪ ಅಧಿಕಾರಿಗಳಿಗೆ ಎಚ್ಚರಿಸಿದರು.
ಜೋಸೆಫ್ ನಗರದಲ್ಲಿನ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ (ಆವಿನಹಳ್ಳಿ) ವಿದ್ಯಾರ್ಥಿಗಳು ಇತ್ತೀಚೆಗೆ ಮೂಲಭೂತ ಸೌಕರ್ಯ ಹಾಗೂ ಅಧಿಕಾರಿಗಳ ವಿರುದ್ಧ ಹಾಸ್ಟೇಲ್ ತೊರೆದು ತಡರಾತ್ರಿ ಪ್ರತಿಭಟನೆ ನೆಡೆಸಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ಹೆಚ್. ಹಾಲಪ್ಪ ಅವರು ವಸತಿ ಶಾಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳ ಸಭೆ ನೆಡೆಸಿ, ವಿದ್ಯಾರ್ಥಿಗಳ ಕುಂದುಕೊರತೆ ವಿಚಾರಿಸಿ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡುವಂತೆ, ಹಾಸ್ಟೆಲ್ ಗಳಲ್ಲಿ ಸ್ವಚ್ಛತೆ ಕಾಪಾಡಿಕೊಂಡು, ಮಕ್ಕಳಿಗೆ ಅವಶ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post