ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ಕನ್ನಡ ಸೇರಿದಂತೆ ವಿವಿಧ ಭಾಷಾ ಚಿತ್ರಗಳಲ್ಲಿ ನಟಿಸಿದ್ದ ಬಹುಭಾಷಾ ನಟಿ ಮೀನಾ Actress Meena ಅವರ ಪತಿ ವಿದ್ಯಾಸಾಗರ್ ಅವರು ಬುಧವಾರ ಮುಂಜಾನೆ ನಿಧನರಾಗಿದ್ದಾರೆ.
ಇತ್ತೀಚಿನ ಕೋವಿಡ್ -19 Covid-19 ಸೋಂಕಿನಿಂದ ವಿದ್ಯಾಸಾಗರ್ ಅವರು ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವಿದ್ಯಾ ಸಾಗರ್ ಅವರನ್ನು 2009ರಲ್ಲಿ ವಿದ್ಯಾಸಾಗರ್ ನಟಿ ಮೀನಾ ವಿವಾಹವಾಗಿದ್ದರು.
ಮೀನಾ ಅವರ ಪತಿ ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಹಿರಿಯ ನಟ ಶರತ್ ಕುಮಾರ್ ಸೇರಿದಂತೆ ಮೀನಾ ಅವರ ಸ್ನೇಹಿತರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

,

















