ಕಲ್ಪ ಮೀಡಿಯಾ ಹೌಸ್ | ಜೈಪುರ |
ಉದಯಪುರದಲ್ಲಿ ಟೈಲರ್ ಕನ್ಹಯ್ಯ ಹತ್ಯೆ Knaiah Murder ಮಾಡಿರುವುದು ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಪ್ರಕರಣ ಬೆಳಕಿಗೆ ಬಂದ ನಂತರ ಇಡೀ ರಾಜ್ಯದಲ್ಲಿ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಯಿತು. ಹಾಗೂ ಮುನ್ನೆಚ್ಚರಿಕಾ ಕ್ರಮವಾಗಿ ರಾಜಸ್ಥಾನದ ಎಲ್ಲಾ ಜಿಲ್ಲೆಗಳಲ್ಲಿ ಒಂದು ತಿಂಗಳು ಸಿಆರ್‌ಪಿಸಿ ಸೆಕ್ಷನ್ 144 ಜಾರಿ ಮಾಡಲಾಗಿದೆ.
ಜನರು ಶಾಂತಿ ಕಾಪಾಡುವಂತೆ ಉದಯಪುರ ವಿಭಾಗೀಯ ಆಯುಕ್ತ ರಾಜೇಂದ್ರ ಭಟ್ ಮನವಿ ಮಾಡಿದ್ದು, ಕನ್ಹಯ್ಯಾ ಲಾಲ್ ಅವಲಂಬಿತರನ್ನು ಯುಐಟಿಯಲ್ಲಿ ಪ್ಲೇಸ್‌ಮೆಂಟ್ ಸೇವೆಯ ಮೂಲಕ ನೇಮಕಾತಿ ಮಾಡಿಕೊಳ್ಳುವುದಾಗಿ ಭರವಸೆ ನೀಡಲಾಗಿದೆ. ಹಾಗೂ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು ಎಂದು ಭಟ್ ತಿಳಿಸಿದ್ದಾರೆ.
ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಎಸ್‌ಐಟಿಯಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ), ವಿಶೇಷ ಕಾರ್ಯಾಚರಣೆ ತಂಡದ ಅಶೋಕ್ ಕುಮಾರ್ ರಾಥೋಡ್, ಪೊಲೀಸ್ ಮಹಾನಿರೀಕ್ಷಕ (ಐಜಿ), ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್), ಪ್ರಫುಲ್ಲ ಕುಮಾರ್ ಮತ್ತು ಪೊಲೀಸ್ ಅಧೀಕ್ಷಕ (ಎಸ್‌ಪಿ) ಶ್ರೇಣಿಯ ಅಧಿಕಾರಿ ಮತ್ತು ಹೆಚ್ಚುವರಿ ಎಸ್ಪಿ ಶ್ರೇಣಿಯ ಅಧಿಕಾರಿ ಇದ್ದಾರೆ.
Also read: ಮತಾಂಧರನ್ನು ಹೆಕ್ಕಿ ತೆಗೆದು ಶಿಕ್ಷೆ ನೀಡಬೇಕು: ಶಾಸಕ ಹರತಾಳು ಹಾಲಪ್ಪ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















