ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ದಕ್ಷಿಣ ಕನ್ನಡದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, Heavy rain Dakshina Kannada ಮಂಗಳೂರು ನಗರದ ಪಡೀಲು, ಪಂಪ್ ವೆಲ್, ಬೆಜೈ, ಅತ್ತಾವರ ಸೇರಿದಂತೆ ತಗ್ಗು ಪ್ರದೇಶಗಳು ಜಲಾವೃತವಾಗಿರುವ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಮರವೂರು ಸೇತುವೆ ಹತ್ತಿರದ ರಸ್ತೆಗಳು ಧಾರಾಕಾರ ಮಳೆಗೆ ಹಾನಿಗೀಡಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಸಂಚಾರ ಅಸ್ತವ್ಯಸ್ತವಾಗಿರುವ ಪ್ರದೇಶಗಳ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















