ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹಳಿದಾಟುತ್ತಿದ್ದಾಗ ಕುರಿಗಳಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ 40ಕ್ಕೂ ಅಧಿಕ ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಇಂದು ಸಂಜೆ ಮೈಸೂರು-ಶಿವಮೊಗ್ಗ ಪ್ಯಾಸೆಂಜರ್ ರೈಲು ಭದ್ರಾವತಿ ರೈಲ್ವೆ ನಿಲ್ದಾಣದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಕುರಿಗಳಿಗೆ ಡಿಕ್ಕಿ ಹೊಡೆದಿದೆ.
ರೈಲು ಡಿಕ್ಕಿ ಹೊಡೆದ ರಭಸಕ್ಕೆ ಕುರಿಗಳು ಸ್ಥಳದಲ್ಲಿ ಸಾವುಕಂಡಿವೆ. ಗಂಭೀರವಾಗಿ ಗಾಯಗೊಂಡಿದ್ದ ಕುರಿಗಳು ಜೀವನ್ಮರಣ ಸ್ಥಿತಿಯಲ್ಲಿ ಒದ್ದಾಡುತ್ತಿದ್ದವು. ಈ ಕುರಿಗಳು ಹಾವೇರಿ ಜಿಲ್ಲೆಯ ಸವಣೂರಿನ ಕುರಿಗಾಹಿ ಒಬ್ಬರಿಗೆ ಸೇರಿದ್ದಾಗಿವೆ ಎಂದು ತಿಳಿದು ಬಂದಿವೆ.
ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಹಳಿ ಮೇಲಿಂದ ಕುರಿಗಳನ್ನು ತೆರವು ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ.
Also read: ಮಲೆನಾಡಿನಲ್ಲಿ ಆರಿದ್ರ ಮಳೆಯ ಅಬ್ಬರ: ಮೈದುಂಬಿ ಹರಿಯುತ್ತಿರುವ ತುಂಗೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















