ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ರಾಜ್ಯದ ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಒಂದು ಜೀವ ಬಲಿಯಾಗಿದೆ.
ತಾಲೂಕಿನ ತೊಗರಿಹಂಕಲ್‌ನ ಸರಕಾರಿ ಪ್ರಾಥಮಿಕ ಶಾಲೆಯ ೧ನೇ ತರಗತಿ ವಿದ್ಯಾರ್ಥಿನಿ ಸುಪ್ರಿತಾ ಆಕಸ್ಮಿಕವಾಗಿ ಜಾರಿಬಿದ್ದು ಕಾಫಿ ಎಸ್ಟೇಟ್‌ನ ಹೊಳೆಯಲ್ಲಿ ಕೊಚ್ಚಿ ಹೋಗಿದ್ದಾಳೆ. ಬಾಲಕಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ.

Also read: ಮಲಗಿದ್ದ ಪತಿಯನ್ನು ನಿರ್ದಯವಾಗಿ ಹತ್ಯೆ ಮಾಡಿದ ಪತ್ನಿ! ಕಾರಣವೇನು ಗೊತ್ತಾ?
ಮಳೆಯಿಂದಾಗಿ ಮರಗಳು, ಮನೆಗಳು, ವಿದ್ಯುತ್ ಕಂಬಗಳು ಧರೆಗುರುಳಿದ್ದು, ಕೆಲವೆಡೆ ಸಾರ್ವಜನಿಕರ ಜೀವನ ಅಸ್ತವ್ಯಸ್ತವಾಗಿದೆ. ಹಠಾತ್ ಪ್ರವಾಹದಿಂದಾಗಿ ಸೇತುವೆಗಳು ಮುಳುಗಿವೆ. ಹಾಗೂ ಹಲವೆಡೆ ರಸ್ತೆಗಳಲ್ಲಿ ಭೂಕುಸಿತಗಳು ಮತ್ತು ಮರಗಳು ಉರುಳಿ ಸಂಚಾರಕ್ಕೆ ಅಡ್ಡಿಯಾಗಿದೆ.










Discussion about this post