ದಕ್ಷಿಣ ಕನ್ನಡ, ಮಲೆನಾಡು ಸೇರಿದಂತೆ ರಾಜ್ಯದೆಲ್ಲೆಡೆ ನಿರಂತರ ಮಳೆಯಾಗುತ್ತಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿಗಳು ಯಾವುದೇ ಸಂದರ್ಭದಲ್ಲಿ ಕಾರ್ಯಪ್ರವೃತ್ತರಾಗಿರುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ, ಕೊಡಗು, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಎನ್‌ಡಿಆರ್‌ಎಫ್, ಎಸ್ ಡಿಆರ್ ಎಫ್, ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿಗೆ ತುರ್ತು ಪರಿಸ್ಥಿತಿಗಳಲ್ಲಿ ಕಾರ್ಯನಿರತವಾಗುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರಕೃತಿ ವಿಕೋಪ ಸಂದರ್ಭದಲ್ಲಿ ಪರಿಹಾರ ಕಾಮಗಾರಿ ಕೈಗೊಳ್ಳಲು ಮೈಸೂರಿನ ಎನ್‌ಡಿಆರ್‌ಎಫ್ ತಂಡವನ್ನು ಕೊಡಗಿಗೆ ನೇಮಿಸಲಾಗುತ್ತಿದೆ. ಮಂಗಳೂರಿನಲ್ಲಿ ಎನ್‌ಡಿಆರ್‌ಎಫ್ ತಂಡವಿದ್ದು, ಎಸ್‌ಡಿಆರ್‌ಎಫ್ ತಂಡ ಕೂಡ ಇರುತ್ತದೆ. ಕಾರವಾರ ಮತ್ತು ಉಡುಪಿಯಲ್ಲಿ ಸಹ ಜಾಗೃತ ದಳ ನೇಮಿಸಲಾಗಿದೆ ಎಂದರು.
Also read:ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ ಕಾರವಾರ, ಉಡುಪಿ, ಮಂಗಳೂರಿನಲ್ಲಿ ಆಗುತ್ತಿರುವ ಕಡಲ ಕೊರೆತಕ್ಕೆ ತಾತ್ಕಾಲಿಕ ಪರಿಹಾರ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೊಡಗು ಜಿಲ್ಲೆಯಲ್ಲಿ ಭೂಕುಸಿತವಾಗುವ ಪ್ರದೇಶಗಳಲ್ಲಿ ಜನವಸತಿಯಿದ್ದರೆ ಅಲ್ಲಿರುವವರನ್ನು ಸ್ಥಳಾಂತರ ಮಾಡಿ, ರಸ್ತೆಗಳನ್ನು ಸಹ ತೆರವು ಮಾಡಲು ಸೂಚಿಸಲಾಗಿದೆ. ಮಳೆ ಹೆಚ್ಚಾಗಿ ಹಾನಿಯಾಗಿರುವ ಕಡೆಯೆಲ್ಲಾ ಜಿಲ್ಲಾಧಿಕಾರಿಗಳಿಗೆ ಖುದ್ದಾಗಿ ಹೋಗಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದ್ದೇನೆ ಎಂದರು. ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post