ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತುಂಗಾ ಜಲಾನಯನ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿದಿರುವುದರಿಂದ, ಶಿವಮೊಗ್ಗ ನಗರದ ಮೂಲಕ ಹಾದು ಹೋಗಿರುವ ತುಂಗಾ ನದಿಯೂ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.
ಶನಿವಾರ ಬೆಳಿಗ್ಗೆಯ ಮಾಹಿತಿಯಂತೆ ಡ್ಯಾಂನಿಂದ 51,380 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಪ್ರಸ್ತುತ ಡ್ಯಾಂನ ಒಳಹರಿವು 58,770 ಕ್ಯೂಸೆಕ್ ಗೆ ಏರಿಕೆಯಾಗಿದೆ. ಪ್ರಸ್ತುತ ಡ್ಯಾಂನ ಎಲ್ಲ ಕ್ರಸ್ಟ್ ತೆರೆದು ನೀರು ಹರಿಬಿಡಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಜಲಾಶಯಗಳ ಒಳಹರಿವಿನಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದ್ದು, ಭದ್ರಾ ಡ್ಯಾಂ ನೀರಿನ ಒಳಹರಿವು 28,061 ಕ್ಯೂಸೆಕ್ ಇದೆ. 168 ಅಡಿ 8 ಇಂಚು ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನ ಡ್ಯಾಂನಲ್ಲಿ 155 ಅಡಿ 9 ಇಂಚು ನೀರು ಸಂಗ್ರಹವಾಗಿತ್ತು.
Also read: ನಾವು ಸುರಕ್ಷಿತವಾಗಿದ್ದೇವೆ, ಆತಂಕ ಬೇಡ: ಮಾಜಿ ಉಪಮೇಯರ್ ಸುರೇಖಾ ಮುರಳೀಧರ್ ಸ್ಪಷ್ಟನೆ
ರಾಜ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರ ಲಿಂಗನಮಕ್ಕಿ ಡ್ಯಾಂ ಒಳಹರಿವು 47,968 ಕ್ಯೂಸೆಕ್ ಇದೆ. ಡ್ಯಾಂ ನೀರಿನ ಮಟ್ಟ 1775.35 ಅಡಿಯಿದೆ. ಕಳೆದ ವರ್ಷ ಇದೇ ದಿನ ಡ್ಯಾಂನಲ್ಲಿ 1783.75 ಅಡಿ ನೀರು ಸಂಗ್ರಹವಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















