No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಯಾವಾಗ ಮುಕ್ತಾಯವಾಗಲಿದೆ ಶಿವಮೊಗ್ಗ, ಭದ್ರಾವತಿ ರೈಲ್ವೆ ಮೇಲ್ಸೇತುವೆ ಕಾಮಗಾರಿ? ಸಂಸದರು ಹೇಳಿದ್ದೇನು?

kalpa News by kalpa News
July 11, 2022
in ಶಿವಮೊಗ್ಗ
0
ಯಾವಾಗ ಮುಕ್ತಾಯವಾಗಲಿದೆ ಶಿವಮೊಗ್ಗ, ಭದ್ರಾವತಿ ರೈಲ್ವೆ ಮೇಲ್ಸೇತುವೆ ಕಾಮಗಾರಿ? ಸಂಸದರು ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |            

ರೈಲ್ವೆ ಸಂಪರ್ಕದಲ್ಲಿ ಶಿವಮೊಗ್ಗದಲ್ಲಿ ಗಣನೀಯ ಸಾಧನೆ ಮಾಡಲಾಗುತ್ತಿದೆ. ಈಗಾಗಲೇ ಕೋಟೇ ಗಂಗೂರಿನಲ್ಲಿ 111 ಕೋಟಿ ರೂ. ವೆಚ್ಚದಲ್ಲ್ಲಿ ರೈಲ್ವೆ ಸರ್ವಿಸ್ ಸ್ಟೇಷನ್ ನಿರ್ಮಿಸಲಾಗುತ್ತಿದೆ. ಹಾಗೂ ತಾಳಗುಪ್ಪ, ಶಿರಸಿ ಮತ್ತು ಹುಬ್ಬಳ್ಳಿಗೆ ಹೊಸ ರೈಲ್ವೆ ಮಾರ್ಗ ರಚಿಸುವುದೇ ನನ್ನ ಮುಂದಿನ ಗುರಿ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ತಿಳಿಸಿದರು.

ಭದ್ರಾವತಿಯ ಕಡದಕಟ್ಟೆ, ವಿದ್ಯಾನಗರ, ಉಷಾ ನರ್ಸಿಂಗ್ ಹೋಮ್, ಕಾಶಿಪುರ ಬಳಿ ನಿರ್ಮಿಸಲಾಗುತ್ತಿರುವ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1500ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ಮತ್ತು ರಾಣೇಬೆನ್ನೂರು ಮಧ್ಯೆ ಹೊಸ ರೈಲ್ವೆ ಮಾರ್ಗ ನಿರ್ಮಿಸಲಾಗುತ್ತಿದೆ. ಇನ್ನು ಮುಂದಿನ ಕೆಲವೇ ತಿಂಗಳಲ್ಲಿ ಈ ರೈಲ್ವೆ ಮಾರ್ಗ ಉದ್ಘಾಟಿಸಲಾಗುವುದು ಎಂದರು.
ಮಲೆನಾಡಿನ ಜನರಿಗೆ ಅನುಕೂಲವಾಗುವಂತೆ ಮುಂದಿನ ಬಜೆಟ್‌ನಲ್ಲಿ ತಾಳಗುಪ್ಪ, ಶಿರಸಿ ಮತು ಹುಬ್ಬಳ್ಳಿಗೆ ರೈಲ್ವೆ ಸಂಪರ್ಕ ಕಲ್ಪಿಸಲು ಸರ್ವೆ ನಡೆಸಲಾಗುತ್ತಿದೆ. ಈ ಸಂಬಂಧ ರೈಲ್ವೆಯ ಎಲ್ಲಾ ಯೋಜನೆಗಳ ಕುರಿತು ದಕ್ಷಿಣ., ಪಶ್ಚಿಮ ರೈಲ್ವೆ ವಿಭಾಗದ ಜನರಲ್ ಮ್ಯಾನೇಜರ್ ಜೊತೆ ಚರ್ಚಿಸಲು ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಿದ್ದೇನೆ. ಮುಂದಿನ ಬಜೆಟ್‌ನಲ್ಲಿ ಇದಕ್ಕೆ ಅನುಮೋದನೆ ಪಡೆಯಲಾಗುವುದು ಎಂದು ತಿಳಿಸಿದರು.

ನಗರದಲ್ಲಿ 4 ಆರ್‌ಒಬಿ ಮತ್ತು ಎರಡು ಅಂಡರ್ ಬ್ರಿಡ್ಜ್ ಕಾಮಗಾರಿ ನಡೆಯುತ್ತಿದೆ. 50 ಕೋಟಿ ರೂ. ವೆಚ್ಚದಲ್ಲಿ ಯಡಿಯೂರಪ್ಪನವರ ಸರ್ಕಾರ ಭೂಸ್ವಾಧೀನ ಮತ್ತು ಯುಟಿಲಿಟಿ ಶಿಫ್ಟಿಂಗ್ ಒಳಗೊಂಡಿತ್ತು. ಈಗಾಗಲೇ ಭದ್ರಾವತಿ ಕಡದಕಟ್ಟೆ, ಸವಳಂಗ ರಸ್ತೆ ಕಾಶೀಪುರದ ರೈಲ್ವೆ ಗೇಟ್ 116 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ವಿದ್ಯಾನಗರದ ರೈಲ್ವೆ ಒವರ್ ಬ್ರಿಡ್ಜ್ ಟ್ರಂಪೆಟ್ ವೃತ್ತಾಕಾರದಲ್ಲಿ 46 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿದೆ ಎಂದರು.
ಶಿವಮೊಗ್ಗ ಜಿಲ್ಲೆಯ ರೈಲ್ವೆ ಯೋಜನೆಗಳ ಕುರಿತ ಮುಖ್ಯ ಅಂಶಗಳು ಹೀಗಿವೆ:
ರೈಲ್ವೆ ರಸ್ತೆ ಮೇಲ್ಸೇತುವೆಗಳು: (3 ಸೇತುವೆಗಳು ರೈಲ್ವೆ ಇಲಾಖೆಯಿಂದ)
ಭದ್ರಾವತಿಯ ಕಡದಕಟ್ಟೆ ಬಳಿಯ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 34 ಹಾಗೂ ಶಿವಮೊಗ್ಗ ಸವಳಂಗ ರಸ್ತೆಯ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 49 ಹಾಗೂ ಕಾಶೀಪುರದ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 54 ಬಳಿಯಲ್ಲಿ ರೈಲ್ವೆ ಇಲಾಖೆಯ ವತಿಯಿಂದ ನಿರ್ಮಿಸಲಾಗುತ್ತಿರುವ ರಸ್ತೆ ಮೇಲ್ಸೇತುವೆಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಶಿವಮೊಗ್ಗ ವಿದ್ಯಾನಗರದ ಬಳಿ ಎಲ್.ಸಿ. 46ಕ್ಕೆ ವೃತ್ತಾಕಾರದ ರೈಲ್ವೆ ಮೇಲ್ಸೇತುವೆ ಕಾಮಗಾರಿಗಳ ಸ್ಥಳ ಪರಿಶೀಲನೆಯನ್ನು ನಡೆಸಿ ನಂತರ ಸಂಬಂಧಿಸಿದ ರೈಲ್ವೆ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಈ ಯೋಜನೆಗಳ ಕ್ಷೀಪ್ರ ಅನುಷ್ಠಾನಕ್ಕಾಗಿ ಅಗತ್ಯವಿರುವ ಕ್ರಮ ಕುರಿತಂತೆ ಚರ್ಚಿಸಲಾಯಿತು.

Also read: ಆಂಬ್ಯುಲೆನ್ಸ್ ಸಿಗದೇ 2 ವರ್ಷದ ತಮ್ಮನ ಶವವನ್ನು ಮಡಿಲಲ್ಲಿ ಮಲಗಿಸಿಕೊಂಡ ಬಾಲಕ

ರೈಲ್ವೆ ಇಲಾಖೆಯ 3 ರಸ್ತೆ ಮೇಲ್ಸೇತುವೆಗಳ ಅಂದಾಜು ವೆಚ್ಚ ರೂ 116 ಕೋಟಿಗಳಾಗಿದ್ದು, ಇದರಲ್ಲಿ ಕಾಮಗಾರಿ ವೆಚ್ಚದ ಶೇ.50ರಷ್ಟನ್ನು ಹಾಗೂ ಭೂಸ್ವಾಧೀನದ ಸಂಪೂರ್ಣವೆಚ್ಚವನ್ನು ರಾಜ್ಯ ಸರ್ಕಾರದ ಭರಿಸುತ್ತದೆ. ಕಾಮಗಾರಿ ವೆಚ್ಚದ ಶೇ.50ರಷ್ಟನ್ನು ರೈಲ್ವೆ ಇಲಾಖೆ ಭರಿಸುತ್ತಿದೆ. ಈ ಯೋಜನೆಗೆ ರಾಜ್ಯ ಸರ್ಕಾರದ ಪಾಲು 70ಕೋಟಿ ರೂ. ರೈಲ್ವೆ ಇಲಾಖೆಗೆ ರಾಜ್ಯ ಸರ್ಕಾರದಿಂದ ಈಗಾಗಲೇ 8.61 ಕೋಟಿ ರೂ.ಗಳನ್ನು ಹಾಗೂ ಭೂಸ್ವಾಧೀನಕ್ಕಾಗಿ 20.60ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಖಾಸಗಿ ಕಂಪನಿಯವರು ಈ 3 ಯೋಜನೆಗಳ ಗುತ್ತಿಗೆ ಪಡೆದಿದ್ದಾರೆ. ಈಗಾಗಲೇ ಕಾಮಗಾರಿಯು ಶೇ. 30ರಿಂದ 40ರಷ್ಟು ಆಗಿದ್ದು, ಕಾಮಗಾರಿ ಭರದಿಂದ ಸಾಗುತ್ತಿದೆ. ಮುಂದಿನ ಡಿಸೆಂಬರ್/ ಜನವರಿ ತಿಂಗಳುಗಳಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು.
ಶಿವಮೊಗ್ಗ ನಗರದ ವಿದ್ಯಾನಗರ ಬಳಿಯಲ್ಲಿ ಟ್ರಂಪ್ಪೆಟ್ ವಿನ್ಯಾಸದ ರೈಲ್ವೆ ಮೇಲ್ಸೇತುವೆ :
ಶಿವಮೊಗ್ಗ ನಗರದ ವಿದ್ಯಾನಗರದ ಬಳಿ ಎಲ್.ಸಿ. ಗೇಟ್ ನಂ: 46ರಲ್ಲಿ ವೃತ್ತಕಾರದ ರೈಲ್ವೆ ಮೇಲ್ಸೇತುವೆ ಅಂದಾಜು ವೆಚ್ಚ 43.90 ಕೋಟಿರೂ. ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಕಾಮಗಾರಿ ಅನುಷ್ಟಾನಗೊಳ್ಳುತ್ತಿದೆ.

ಶಿವಮೊಗ್ಗ -ಶಿಕಾರಿಪುರ-ರಾಣೆಬೆನ್ನೂರು ನೂತನ ರೈಲು ಮಾರ್ಗ ಯೋಜನೆ (103 ಕಿ.ಮೀ):
ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ನೂತನ ರೈಲು ಮಾರ್ಗ ಯೋಜನೆಯನ್ನು 2 ಹಂತಗಳಲ್ಲಿ ಅನುಷ್ಠನಗೊಳಿಸಲು ನಿರ್ಧರಿಸಲಾಗಿದೆ. ಮೊದಲನೆ ಹಂತದಲ್ಲಿ ಶಿವಮೊಗ್ಗ-ಶಿಕಾರಿಪುರ ನಡುವಿನ ಕಾಮಗಾರಿಗೆ ಸಂಬಂಧಿಸಿದೆ. ಹಾಗೂ ಎರಡನೇ ಹಂತವು ಶಿಕಾರಿಪುರ-ರಾಣೆಬೆನ್ನೂರು ನಡುವಿನ ಕಾಮಗಾರಿಗೆ ಸಂಬಂಧಿಸಿದೆ.
ಶಿವಮೊಗ್ಗ-ಶಿಕಾರಿಪುರ ನಡುವಿನ 54 ಕಿಮೀಗಳ ರೈಲು ಮಾರ್ಗದ ನಿರ್ಮಾಣಕ್ಕಾಗಿ ಒಟ್ಟಾರೆ 388 ಎಕರೆ ಖಾಸಗಿ ಜಮೀನು, ಹಾಗೂ 118 ಎಕರೆ ಅರಣ್ಯ ಭೂಮಿ ಹಾಗೂ 45 ಎಕರೆ ಸರ್ಕಾರಿ ಜಮೀನು. ಕೆಐಎಡಿಬಿ ಸಂಸ್ಥೆ ಈಗಾಗಲೇ ಎಲ್ಲ ಖಾಸಗಿ ಜಮೀನಿನ ಸ್ವಾಧೀನಕ್ಕಾಗಿ ಅಂತಿಮ ಅಧಿಸೂಚನೆಯನ್ನು ಹೊರಡಿಸಿದ್ದು ಇದರಲ್ಲಿ ಸುಮಾರು 220-225 ಎಕರೆ ಭೂಮಿಯ ಮಾಲೀಕರಿಗೆ ಭೂಪರಿಹಾರವನ್ನು ವಿತರಣೆ ಮಾಡಿದ್ದು, ಉಳಿದವರಿಗೆ ಅವಾರ್ಡ್ ನೋಟೀಸ್ ಜಾರಿಯಾಗಿದೆ. ರೈಲ್ವೆ ಇಲಾಖೆಗೆ ಜಮೀನು ಹಸ್ತಾಂತರಿಸಲಾಗಿದೆ. ರೈಲ್ವೆ ಇಲಾಖೆಯಿಂದ ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ.

ಕೋಟೆಗಂಗೂರು ಕೋಚಿಂಗ್ ಡಿಪೋ:
ಕೋಟೆಗಂಗೂರಿನಲ್ಲಿ ಒಟ್ಟು 111.75 ಕೋಟಿ ವೆಚ್ಚದಲ್ಲಿ ಕೋಚಿಂಗ್ ಯಾರ್ಡ್ ನಿರ್ಮಾಣ ಮಾಡಲಾಗುತ್ತಿದ್ದು, ಇದರಲ್ಲಿ ಕೋಚಿಂಗ್ ಡಿಪೋ ಮತ್ತು ಟರ್ಮಿನಲ್ ಸ್ಟೇಷನ್ ಸಹ ನಿರ್ಮಾಣ ಮಾಡಲಾಗುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMP RaghavendraNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share214Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುಮದ್ವತಿ ನದಿಯಲ್ಲಿ ಕೊಚ್ಚಿ ಹೋಗಿದ್ದ ವೃದ್ಧೆ ಶವವಾಗಿ ಪತ್ತೆ

Next Post

ಇಂದಿನಿಂದ ಮತ್ತೆ ಪುನಾರಂಭಗೊಂಡ ಅಮರನಾಥ ಯಾತ್ರೆ

kalpa News

kalpa News

Next Post
ಇಂದಿನಿಂದ ಮತ್ತೆ ಪುನಾರಂಭಗೊಂಡ ಅಮರನಾಥ ಯಾತ್ರೆ

ಇಂದಿನಿಂದ ಮತ್ತೆ ಪುನಾರಂಭಗೊಂಡ ಅಮರನಾಥ ಯಾತ್ರೆ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL