ಕಲ್ಪ ಮೀಡಿಯಾ ಹೌಸ್ | ಸೊರಬ |
ತಾಲೂಕಿನ ಚಂದ್ರಗುತ್ತಿ ಸಮೀಪದ ಕತವಾಯಿ ಗ್ರಾಮದಲ್ಲಿ ಬಿರುಸಿನ ಗಾಳಿ ಮಳೆಗೆ ಮನೆ ಮೇಲೆ ಮರಗಳು ಉರುಳಿದ ಪರಿಣಾಮ ತಾಯಿ ಮತ್ತು ಮಗ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ಗ್ರಾಮದ ಕಾಮಾಕ್ಷಮ್ಮ ತಿಮ್ಮಪ್ಪ (60) ಹಾಗೂ ಅವರ ಪುತ್ರ ದೇವರಾಜ ತಿಮ್ಮಪ್ಪ (31) ಗಾಯಗೊಂಡವರು.
ಮನೆಯಲ್ಲಿ ಬೆಳಗ್ಗೆ ಉಪಹಾರ ಸೇವಿಸುವ ವೇಳೆಯಲ್ಲಿ ಬಿರುಸಿನ ಗಾಳಿ ಮಳೆಗೆ ಬೃಹತ್ ಗಾತ್ರದ ಹುಣಸೆಮರ ಹಾಗೂ ಎರಡು ತೆಂಗಿನ ಮರಗಳು ಮನೆಯ ಮೇಲ್ಛಾವಣಿಯ ಮೇಲೆ ಬಿದ್ದಿವೆ. ಪರಿಣಾಮ ತಾಯಿ ಮತ್ತು ಮಗ ಗಾಯಗೊಂಡಿದ್ದಾರೆ. ಜೊತೆಗೆ ಮನೆ, ಕೊಟ್ಟಿಗೆ ಮತ್ತು ಶೌಚಗೃಹಕ್ಕೂ ಸಾಕಷ್ಟು ಹಾನಿಯಾಗಿದೆ.
Also read: ಮಾವಿನ ಗಿಡ ನೆಡುವುದರ ಮೂಲಕ ಜನ್ಮದಿನಾಚರಣೆ ಆಚರಿಸಿಕೊಂಡ ಪ್ರಗತಿಪರ ರೈತ ದಯಾನಂದಮೂರ್ತಿ
ಗಾಯಾಳುಗಳಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪ್ರಭಾರ ಉಪತಹಶೀಲ್ದಾರ್ ಶಿವಪ್ರಸಾದ್, ಗ್ರಾಪಂ ಪಿಡಿಒ ನಾಗೇಂದ್ರ, ಗ್ರಾಪಂ ಅಧ್ಯಕ್ಷ ಎಂ.ಪಿ. ರತ್ನಾಕರ, ಸದಸ್ಯ ರೇಣುಕಾ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಯಜಮಾನ ತಿಮ್ಮಪ್ಪ ಮಾರ್ಯಾಪ್ಪ ನೆರೆಯ ಮೂಡಜೋಳಿಗೆ ಗ್ರಾಮದ ಸಂಬಂಧಿಕರ ಮನೆಗೆ ತೆರಳಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.

ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















