ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿ ಬಗ್ಗೆ ಸೂಕ್ತ ತನಿಖೆಗೆ ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಸಂಪೂರ್ಣ ಕಳೆಯಾಗಿದೆ. ಕೇವಲ 15 ದಿನದ ಮಳೆಗೆ ರಸ್ತೆಗಳೆಲ್ಲಾ ಹಾಳಾಗಿವೆ. ಬಹುತೇಕ ಕಡೆಗಳಲ್ಲಿ ಫುಟ್ ಪಾತ್ ಗಳು ಕಿತ್ತು ಹೋಗಿವೆ. ಇದರಿಂದ ಅವ್ಯವಹಾರ ಹಾಗೂ ಭ್ರಷ್ಟಾಚಾರ ನಡೆದಿರುವುದು ಎದ್ದು ಕಾಣುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ತೆರಿಗೆ ರೂಪದಲ್ಲಿ ಜನರು ಕಟ್ಟಿದ ಕೋಟ್ಯಂತರ ರೂ. ಹಣವನ್ನು ಅಧಿಕಾರಿಗಳು ಮನಸ್ಸಿಗೆ ಬಂದಂತೆ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಈ ವಿಷಯದ ಬಗ್ಗೆ ಗಮನಹರಿಸಬೇಕು. ಕಳಪೆ ಕಾಮಗಾರಿಗಳ ಬಗ್ಗೆ ತನಿಖೆ ನಡೆಸಬೇಕು. ತಪ್ಪಿತಸ್ಥರ ಮೇಲೆ ಅಗತ್ಯ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
Also read: ಮನೆ ಗೋಡೆ ಕುಸಿತ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ತಾಯಿ, ಮಗಳು
ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರಾದ ಏಳುಮಲೈ (ಕೇಬಲ್ ಬಾಬು), ನೇತ್ರಾವತಿ, ಕಿರಣ್, ಸುರೇಶ್ ಕಾಟೇಕರ್, ರಮೇಶ್ ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post