ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೇಂದ್ರ ಪರಿಸರ ಸಚಿವಾಲಯ, ಪಶ್ಚಿಮ ಘಟ್ಟ Western Ghat ಸೂಕ್ಷ್ಮ ವಲಯದ ಬಗ್ಗೆ ಹೊರಡಿಸಿರುವ ಅಧಿಸೂಚನೆ ವಿರುದ್ಧ, ಕಾನೂನಿನ ಹೋರಾಟ ನಡೆಸಲು, ಮಲೆನಾಡು ಹಾಗೂ ಕರಾವಳಿ ಪ್ರದೇಶದ ಸಚಿವರು ಹಾಗೂ ಶಾಸಕರು ಪಕ್ಷ ಬೇಧ ಮರೆತು ಒಮ್ಮತದ ನಿರ್ಧಾರಕ್ಕೆ ಬಂದಿದ್ದಾರೆ.
ಈ ಕುರಿತಂತೆ ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಂಡು, ಅಧಿಸೂಚನೆ ವಿರುದ್ಧ ಒಕ್ಕೊರಲಿನಿಂದ ವಿರೋಧ ವ್ಯಕ್ತಪಡಿಸಲಾಗಿದೆ.
ಸಭೆಯ ನಂತರ, ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರು, ಕೇಂದ್ರ ಪರಿಸರ ಸಚಿವಾಲಯದ ಅಧಿಸೂಚನೆ ಕುರಿತು, ಸಭೆಯಲ್ಲಿ, ಪಕ್ಷ ಬೇಧ ಮರೆತು, ಒಕ್ಕೊರಲಿನ ವಿರೋಧ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ CM Basavaraja Bommai ಅವರು ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ದಾರೆ ಎಂದರು.
Also read: ದಾವಣಗೆರೆ: ಬೂಸ್ಟರ್ ಡೋಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
ಅಧಿಸೂಚನೆ ವಿರುದ್ಧ ಕಾನೂನಿನ ಹೋರಾಟ ಮಾಡುವುದಲ್ಲದೆ, ಜನಾಭಿಪ್ರಾಯ ಸಂಗ್ರಹಕ್ಕೆ ನಿರ್ಧರಿಸಲಾಗಿದೆ. ಅಧಿಸೂಚನೆ ವಿರುದ್ಧ, ಪರಿಸರ ಸಚಿವರ ಬಳಿಗೆ, ಮುಖ್ಯಮಂತ್ರಿಯವರ ನೇತೃತ್ವದಲ್ಲಿ, ಲೊಕಸಭಾ ಸದಸ್ಯರ ಹಾಗೂ ಶಾಸಕರನ್ನು ಒಳಗೊಂಡ ನಿಯೋಗವನ್ನು ತೆಗೆದುಕೊಂಡು ಹೋಗಲಾಗುತ್ತದೆ. ವರದಿಯ ಬಗ್ಗೆ ಈ ಹಿಂದೆ ವ್ಯಕ್ತವಾದ ಯಾವುದೇ ಆಕ್ಷೇಪಣೆ ಗಳನ್ನು ಪರಿಗಣಿಸಿಲ್ಲ. ಸರಿಯಾದ ಹಾಗೂ ವೈಜ್ಞಾನಿಕ ಸರ್ವೇ ಕಾರ್ಯ ನಡೆದಿಲ್ಲ ಎಂದು ಹೇಳಿದರು.
ಒಂದು ವೇಳೆ ಅಧಿಸೂಚನೆ ಅನುಷ್ಠಾನಗೊಂಡರೆ ಗ್ರಾಮೀಣ ಭಾಗದ ಜನತೆಯ ಬದುಕು ಅಸಹನೀಯವಾಗುತ್ತದೆ. ಅಧಿಸೂಚನೆಯನ್ನು ಶತಾಯ ಗತಾಯ ವಿರೋದಿಸಲಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಆನಂದ್ ಸಿಂಗ್, ಶಿವರಾಮ್ ಹೆಬ್ಬಾರ್, ಎಸ್. ಅಂಗಾರ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಾಗರ ಶಾಸಕ ಎಚ್. ಹಾಲಪ್ಪ ಹಾಗೂ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post